ವಾಶಿಂಗ್ಟನ್, ಏ.11, ಕೊರೊನಾ ವೈರಸ್ ಹಿನ್ನೆಲೆ ಜಾಗತಿಕ ಮಾರುಕಟ್ಟೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದಾರೆ."ಅಧ್ಯಕ್ಷ ಟ್ರಂಪ್ ಮತ್ತು ಅಧ್ಯಕ್ಷ ಪುಟಿನ್ ಅವರು ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳುವ ಇತ್ತೀಚಿನ ಪ್ರಯತ್ನಗಳ ಬಗ್ಗೆ ಚರ್ಚಿಸಿದ್ದಾರೆ. ಉಭಯ ನಾಯಕರು ವೈರಸ್ ಸಮಸ್ಯೆ ಹಾಗೂ ಜಾಗತಿಕ ಬಿಕಟ್ಟಿನ ಬಗ್ಗೆ ಬೆಳಕು ಚೆಲ್ಲಿದ್ದಾರೆ” ಜಾಗತಿಕ ವಿಷಯಗಳನ್ನೂ ಸಹ ಒಳಗೊಂಡಿದೆ" ಎಂದು ಶ್ವೇತಭವನ ಹೇಳಿಕೆಯಲ್ಲಿ ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ ಉಭಯ ನಾಯಕರು ಎರಡನೇ ಬಾರಿ ಸಂಭಾಚಣೆಮಾಡಿದ್ದಾರೆ. ಜಾಗತಿಕ ತೈಲ ಮಾರುಕಟ್ಟೆಯನ್ನು ಸ್ಥಿರಗೊಳಿಸುವ ಗುರಿಯನ್ನು ಹೊಂದಿರುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.