ತಾಲೂಕ ಮಟ್ಟದ ಜನಸ್ಪಂದನ ಕಾರ್ಯಕ್ರಮ

ರಾಯಬಾಗ 21: ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಸಾರ್ವಜನಿಕ ಅಹವಾಲುಗಳಿಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತ್ವರಿತವಾಗಿ ಸ್ಪಂಧಿಸುವದರ ಮೂಲಕ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.   

ಪಟ್ಟಣದ ಡಾ. ಬಾಬು ಜಗಜೀವನರಾಂ ಸಭಾ ಭವನದಲ್ಲಿ ಶನಿವಾರ ನಡೆದ ತಾಲೂಕ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ,  ಇಡೀ ಆಡಳಿತವೆ ಜನರ ಬಳಿಗೆ ಬಂದು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸ್ಪಂಧನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.   

ಸಾರ್ವಜನಿಕರು ಸರಕಾರಿ ಕಚೇರಿಗೆ ಅಲೆದಾಡುವದನ್ನು ತಪ್ಪಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವದರ ಮೂಲಕ ಸಮಸ್ಯೆಗಳ ನಿವಾರಣೆಗೆ ಮುಂದಾಗಬೇಕೆಂದರು.  ಜಿಲ್ಲಾಪಂಚಾಯತ ಮುಖ್ಯಕಾರ್ಯನಿರ್ವಾಹನಾ ಅಧಿಕಾರಿ ರಾಹುಲ ಶಿಂಧೆ, ರಾಯಬಾಗ ಶಾಸಕ ಡಿ ಎಂ ಐಹೊಳೆ, ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ಎಸಿ ಸುಭಾಷ ಸಂಪಗಾಂವಿ, ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ತಹಶೀಲ್ದಾರ್ ಸುರೇಶ ಮುಂಜೆ, ತಾ.ಪಂ, ಇಒ ಅರುಣ ಮಾಚಕನೂರ, ಪ.ಪಂ.ಅಧ್ಯಕ್ಷ  ಅಶೋಕ ಅಂಗಡಿ ಸೇರಿ ಅನೇಕರು ಇದ್ದರು.