ತಾಲೂಕು ಆಡಳಿತದಿಂದ ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ
Taluk administration celebrates Veerarani Onake Obavva Jayanti
ಹುಬ್ಬಳ್ಳಿ 11: ಒನಕೆ ಓಬವ್ವ ಎಂದರೆ ಕೇವಲ ಒಬ್ಬಳು ಮಹಿಳೆಯಲ್ಲ ತನ್ನ ವೀರ, ಶೌರ್ಯ,ಪರಾಕ್ರಮ, ಗಳಿಂದ ಹೆಸರು ವಾಸಿಯಾದವಳು ವೀರರಾಣಿ ಒನಕೆ ಒಬ್ಬವ ಸಮಾಜದಲ್ಲಿ ಬದುಕುತ್ತಿರುವ ಪ್ರತಿಯೊಬ್ಬ ಮಹಿಳೆಯರಿಗೂ ಮಾದರಿ ಎಂದು ಹುಬ್ಬಳ್ಳಿ ನಗರದ ತಹಶೀಲ್ದಾರ ಮಹೇಶ ಗಸ್ತೆ ರವರು ಹೇಳಿದರು.
ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದಿಂದ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಏಕೆಂದರೆ ಮಹಿಳೆಯರು ಎಲ್ಲ ಕ್ಷೇತ್ರದಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಮತ್ತು ಸಮಾಜದಲ್ಲಿ ಮಹಿಳಾ ಸಬಲೀಕರಣವಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ವೀರರಾಣಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಾರೆ್ಪಣ ಅರ್ಿಸಿ, ಪೂಜೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ.ಬಿ. ಮಜ್ಜಗಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕಿ ನಿರ್ದೇಶಕರಾದ ಪ್ರಿಯದರ್ಶಿನಿ ಹಿರೇಮಠ, ಮೇಘರಾಜ ಹಿರೇಮಠ, ಶೋಭಾ ಬಳ್ಳಾರಿ, ಶಂಕರ ಅಜಮಣಿ, ಶಂಕರ ಭಂಡಾರಿ, ರಮೇಶ ಕುಡ್ಡಪಲ್ಲಿ, ವರ್ಣೇಕರ ,ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಮಕ್ಕಳು ಇನ್ನಿತರರು ಉಪಸ್ಥಿತರಿದ್ದರು. ಚಂದ್ರಶೇಖರ್ ಯಾದಗೇರಿ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 