ತಾಲೂಕು ಆಡಳಿತದಿಂದ ಯೋಗಿ ನಾರೇಯಣ ಯತೀಂದ್ರರ ಜಯಂತಿ
Taluk administration celebrates Yogi Narayan Yathindra's birth anniversary
ಹುಬ್ಬಳ್ಳಿ ಮಾ.3: ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಕಂದಾಯ ಇಲಾಖೆ ಮತ್ತು ತಾಲೂಕು ಆಡಳಿತದಿಂದ ಯೋಗಿ ನಾರೇಯಣ ಯತೀಂದ್ರರ ( ಕೈವಾರ ತಾತಯ್ಯ) ಜಯಂತೋತ್ಸವವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಮಹೇಶ ಭಗವಂತ ಗಸ್ತೆ ಅವರು ಯೋಗಿ ನಾರೇಯಣ ಯತೀಂದ್ರರ ( ಕೈವಾರ ತಾತಯ್ಯ)ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಿಗೆ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹುಬ್ಬಳ್ಳಿಯ ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರೇಡ್ 2 ತಹಶೀಲ್ದಾರ ಸಿ.ಎಸ್.ಕುಲಕರ್ಣಿ, ಸಮಾಜದ ಮುಖಂಡರಾದ ವೆಂಕಟೇಶ ಮುತ್ತಗಾರ, ಶಶಿಕಾಂತ ಬೀಜವಾಡ, ಅಟಲ್ ಭಾಷಾ ಮುದ್ದಿನಮನಿ, ಎನ್.ಎನ್. ಕರನೆದ್ದಿ, ಚನ್ನಪ್ಪ ತರ್ಲಘಟ್ಟ, ಸಾಯಿನಾಥ್ ರಾಚೋಟಿ, ನಿಂಗಪ್ಪ ಬಡಿಗೇರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 