ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ತಾಲೂಕು ಮಟ್ಟದ ಸರ್ಕಾರಿ ಅಧಿಕಾರಿಗಳು ಸದಾ ಜಾಗೃತರಾಗಿರಬೇಕು
Taluk level government officials should always be vigilant in implementing various projects
ರಾಣೆಬೆನ್ನೂರ 6: ಜನರಿಗೆ ಸಮರ್ಕವಾಗಿಸರಕಾರದವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ತಾಲೂಕು ಮಟ್ಟದ ಸರ್ಕಾರಿ ಅಧಿಕಾರಿಗಳು ಸದಾ ಜಾಗೃತರಾಗಿರಬೇಕು. ಜೊತೆಗೆ ಶ್ರೀಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಪ್ರಾಮಾಣಿಕ ಸೇವೆ ಮಾಡಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಹಾಗೂ ರಾಣೆಬೆನ್ನೂರ ತಾಪಂ ಆಡಳಿತ ಅಧಿಕಾರಿ ಡಾ. ಪುನೀತ್ ಆರಿ್ಬ ಸೂಚಿಸಿದರು. ಅವರು ಶುಕ್ರವಾರ ಇಲ್ಲಿನ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಸರಕಾರದ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳನ್ನು ಪರೀಶೀಲಿಸಿ ಮಾತನಾಡಿದರು.
ಸರ್ಕಾರ ಇರುವುದು ಶ್ರೀಸಾಮಾನ್ಯರ ಸೇವೆಗಾಗಿ, ಅದಕ್ಕಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರದ ಯೋಜನೆಗಳನ್ನು ಕಾಲಕಾಲಕ್ಕೆ ಅವರುಗಳಿಗೆ ತಲುಪಿಸುವುದರ ಮೂಲಕ ಯೋಜನೆಗಳ ಸದುಪಯೋಗ ಆಗಬೇಕು ಎಂದು ಅವರು ಹೇಳಿದರು. ವಿವಿಧ ತಾಲೂಕು ಮಟ್ಟದ ಇಲಾಖೆಯ ಅಧಿಕಾರಿಗಳು, ಜನಸಾಮಾನ್ಯರ ಅಹವಾಲುಗಳಿಗೆ ಬೇಜವಾಬ್ದಾರಿತನ ಹಾಗೂ ಅಲಕ್ಷ ತೋರುವುದು ಕಂಡುಬಂದಲ್ಲಿ ಅಂತಹವರ ಮೇಲೆ ನೋಟೀಸ್ ಜಾರಿಗೊಳಿಸಿ ಕ್ರಮ ಕೈಗೊಳ್ಳುವುದಾಗಿ ಪುನೀತ್ ರವರು ಎಚ್ಚರಿಸಿದರು. ಮುಂಬರುವ ಮುಂಗಾರು ಮಳೆಯ ಆಗಮನದ ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿಗಳು ಜಾಗೃತೆ ವಹಿಸಿ ಜನರಿಗಾಗುವ ಅವಘಡ, ಅನಾಹುತಗಳನ್ನು ತಪ್ಪಿಸುವಲ್ಲಿ, ಹಾಗೂ ಅವರುಗಳ ತೊಂದರೆಯನ್ನು ತಪ್ಪಿಸಲು ಸದಾ ಜಾಗೃತರಾಗಿರಬೇಕೆಂದು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 