17ರಂದು ರೈತ ಸಂಘದ ತಾಲೂಕ ಮಟ್ಟದ ಸಭೆ
Taluk level meeting of the Farmers' Association on the 17th
ಪಾಲಬಾವಿ 15: ವಿದ್ಯುತ್ ಖಾಸಗಿಕರಣ ಕೈಬಿಡುವುದು, ರೈತರಿಗೆ ಎಫ್‌ವಿಡಿ- ಯುರಿಯಾ ಲಿಂಕ್ ಮಾಡುವ ಕ್ರಮದ ವಿರೋಧ, ತಾಲೂಕಿನ ರೈತರ ವಿವಿಧ ಸಮಸ್ಯೆಗಳು ಕುರಿತು ಚರ್ಚೆಯನ್ನು ಇದೇ ಜೂನ್.17ರಂದು ಬುಧವಾರ ಮುಂಜಾನೆ 11ಗಂಟೆಗೆ ರಾಯಬಾಗ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಶೇಷ ಸಭೆ ಕರೆಯಲಾಗಿದೆ ಎಂದು ರೈತ ಸಂಘದ ತಾಲೂಕ ಅಧ್ಯಕ್ಷ ರಮೇಶ ಕಲ್ಲಾರ ತಿಳಿಸಿದ್ದಾರೆ. ರಾಯಬಾಗ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘದ ಎಲ್ಲಾ ತಾಲೂಕಿನ ಪದಾಧಿಕಾರಿಗಳು, ಗ್ರಾಮ ಶಾಖೆಯ ಪದಾಧಿಕಾರಿಗಳು ಹಾಗೂ ರೈತ ಸಂಘದ ಕಾರ್ಯಕರ್ತರು ಕಡ್ಡಾಯವಾಗಿ ಈ ಸಭೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9972518434 ಇವರನ್ನು ಸಂಪರ್ಕಿಸಲು ಕೋರಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 