ಬರ ಪರಿಹಾರಕ್ಕೆ ತಾಳೂರು ರಾಘವೇಂದ್ರ ರೆಡ್ಡಿ ಒತ್ತಾಯ

ಬರ ಪರಿಹಾರಕ್ಕೆ ತಾಳೂರು ರಾಘವೇಂದ್ರ ರೆಡ್ಡಿ ಒತ್ತಾಯ  Taluru Raghavendra Reddy urges for drought relief


ಬಳ್ಳಾರಿ, ಸೆ.19 (ಸಿರುಗುಪ್ಪ): ರಾಜ್ಯ ಸರ್ಕಾರವು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ರೈತರಿಗೆ ಕೂಡಲೇ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಸಮಾಜಸೇವಕ ತಾಳೂರು ರಾಘವೇಂದ್ರ ರೆಡ್ಡಿ ಒತ್ತಾಯಿಸಿದರು.  

ಸಿರುಗುಪ್ಪ ತಾಲೂಕಿನಲ್ಲಿ ಕಳೆದ ಮುಂಗಾರು ಹಂಗಾಮಿನಲ್ಲಿ ಕೆಲ ರೈತರು ಹತ್ತಿ ಸೇರಿದಂತೆ ವಿವಿಧ ಬೆಳೆಗಳನ್ನು ಬಿತ್ತನೆ ಮಾಡಿದ್ದರು. ಆದರೆ, ಸಮಯಕ್ಕೆ ಸರಿಯಾಗಿ ಮಳೆಯಾಗದ ಕಾರಣ ಬೆಳೆಗಳು ಹಾನಿಗೊಳಗಾಗಿ ರೈತರು ನಷ್ಟ ಅನುಭವಿಸಿದ್ದಾರೆ. ಸರ್ಕಾರ ತಕ್ಷಣವೇ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.  

ಸಿರುಗುಪ್ಪ ತಾಲೂಕಿನ ಕರೂರು ಹೋಬಳಿಯ ಹೊಸಳ್ಳಿ ಗ್ರಾಮದಲ್ಲಿ ನಡೆದ ‘ಪ್ರಜಾ ಸೇವೆ’ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗೌಸಿಯಾ ಅವರಿಗೆ ಮನವಿ ಪತ್ರ ಸಲ್ಲಿಸಿದ ರಾಘವೇಂದ್ರ ರೆಡ್ಡಿ, ತಾಲೂಕಿನಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಮತ್ತು ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.