ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
Talwar attack: Malamaruti police arrest 6 accused in one hour: Investigation is on
ಬೆಳಗಾವಿ : ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಅಮನ್ ನಗರದ ಮೂವರು ಯುವಕರ ಮೇಲೆ ತಲ್ವಾರ್‌ನಿಂದ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳಮಾರುತಿ ಪೊಲೀಸರು, ಘಟನೆ ನಡೆದ ಒಂದೇ ತಾಸಿನಲ್ಲಿ ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ತಿಳಿದು ಬಂದಿದೆ.
ಈ ಘಟನೆಯಲ್ಲಿ ಗಾಯಗೊಂಡಿದ್ದ ಮೂವರು ಯುವಕರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದಾಳಿ ನಡೆಸಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಮಾಹಿತಿ ಪಡೆದ ಮಾಳಮಾರುತಿ ಠಾಣೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ, ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸಿದರು.
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕೇವಲ ಒಂದೇ ತಾಸಿನಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ವಿಚಾರಣೆಗೊಳಪಡಿಸಲಾಗಿದ್ದು, ದಾಳಿಗೆ ನಿಖರ ಕಾರಣವೇನು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಳೇ ವೈಷಮ್ಯಕ್ಕೆ ಕಾರಣವಾದ ಅಂಶಗಳು, ದಾಳಿ ಪೂರ್ವಯೋಜಿತವಾಗಿತ್ತೇ ಎಂಬುದು ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.
ಈ ಘಟನೆ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 