ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ತಮಟೆ ಚಳುವಳಿ

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ತಮಟೆ ಚಳುವಳಿ  Tamate movement demanding implementation of internal reservation for Scheduled Castes

ಬೆಳಗಾವಿ 18: ಸರ್ವೋಚ್ಛ ನ್ಯಾಯಾಲಯದ ತೀರ​‍್ಿನ ಆಧಾರದ ಮೇಲೆ ತಕ್ಷಣವೇ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಮಾಡಬೇಕೆಂದು ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಬೆಳಗಾವಿ ವತಿಯಿಂದ ದಿ. 18ರಂದು ತಮಟೆ ಚಳುವಳಿ ಹಮ್ಮಿಕೊಂಡು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಅರ​‍್ಿಸಲಾಯಿತು. 

ಪರಿಶಿಷ್ಟ ಜಾತಿಗಳ ಸಮುದಾಯದೊಳಗಿನ ಅತೀ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ಜಾರಿಯಾಗಬೇಕಿರುವ ಒಳ ಮೀಸಲಾತಿಯ ಬೇಡಿಕೆ ಮತ್ತು ಹೋರಾಟ 35 ವರುಷಗಳಿಂದ ನೆನೆಗುದಿಗೆ ಬಿದ್ದಿದೆ. ಈ ಅಸಮಾನತೆಯನ್ನು ಸರಿಪಡಿಸಲು ದಿ. 2024 ಆಗಸ್ಟ್‌ 1ರಂದು ಸರ್ವೋಚ್ಛ ನ್ಯಾಯಾಲಯದ ತೀರ​‍್ು ಸ್ಪಷ್ಟವಾಗಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ಆದೇಶವನ್ನು ನೀಡಿದ್ದು ಸರ್ಕಾರ ಜಾರಿಗೊಳಿಸಲು ಅನಗ್ಯ ವಿಳಂಬ ಮಾಡುತ್ತಿರುವುದು ಸಮಾಜದ ಅಸಮಾಧಾನ ಮತ್ತು ಆತಂಕಕ್ಕೆ ಕಾರಣವಾಗಿದೆ. ಇದರಿಂದಾಗಿ ಸಮಾದಾಯದ ವಿದ್ಯಾರ್ಥಿಗಳು, ಕಾರ್ಮಿಕರು ಮಹಿಳೆಯರು ಹಾಗೂ ಒಟ್ಟಾರೆಸಮಾಜ ತಮ್ಮ ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ನಡೆಯುವ ಚಳಿಗಾಲ ಅಧಿವೇಶನದಲ್ಲಿ ಸರ್ವೋಚ್ಛ ನ್ಯಾಯಾಲಯದ ತೀರ​‍್ಪನನು ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ. 

ಒಂದು ವೇಳೆ ಗಡುವಿನೊಳಗೆ ಈ ಬೇಡಿಕೆಯನ್ನು ಈಡೇರಿಸಲು ಸರ್ಕಾರ ವಿಫಲವಾದರೆ ನಮ್ಮ ಹಕ್ಕುಗಳಿಗಾಗಿ ರಾಜ್ಯಾದ್ಯಂತ ಇರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು, ಕಾರ್ಮಿಕರು, ವಕೀಲರು, ಮಹಿಳೆಯರುಸೇರಿದಂತೆ ಒಗ್ಗೂಡಿ ಹೋರಾಟವನ್ನು ತೀವ್ರಗೊಳಿಸುವುದು ಅನಿವಾರ್ಯವಾಗುತ್ತದೆ. ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.