ಬಿಸಿಲಿನ ತೀವ್ರತೆ ನಡುವೆ ನೀರಿನ ಸಮಸ್ಯೆ ತಡೆಗೆ ಟ್ಯಾಂಕರ್ ವ್ಯವಸ್ಥೆ
Tanker system to prevent water problems amid intense heat
ಚಿಕ್ಕೋಡಿ 27: ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗುತ್ತಿರುವುದರಿಂದ, ನೀರಿನ ಅಭಾವ ಇರುವ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ತಕ್ಷಣ ನೀರು ಪೂರೈಕೆ ಮಾಡುವಂತೆ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅಧಿಕಾರಿಗಳಿಗೆ ಸೂಚಿಸಿದರು.ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು, ರಾಯಬಾಗ ಕ್ಷೇತ್ರ ವ್ಯಾಪ್ತಿಯ ಚಿಕ್ಕೋಡಿ ತಾಲೂಕಿನ 11 ಗ್ರಾಮ ಪಂಚಾಯತಿ ಪ್ರದೇಶಗಳಲ್ಲಿ ನೀರಿನ ತೊಂದರೆ ಉಂಟಾಗದಂತೆ ಕಟ್ಟುನಿಟ್ಟಿನ ನಿಗಾವಹಿಸಬೇಕು ಎಂದು ತಿಳಿಸಿದರು.
ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಹೋಬಳಿಯ ಕೆಲವು ಗ್ರಾಮಗಳ ವಸತಿ ಪ್ರದೇಶಗಳಲ್ಲಿ ಈಗಾಗಲೇ ನೀರಿನ ಕೊರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.ಗ್ರಾಮಗಳಿಗೆ ಅಗತ್ಯವಿರುವಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವುದು, ಕೆಡಕಿರುವ ಕೊಳವೆಬಾವಿಗಳ ದುರಸ್ತಿ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸುವುದು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು. ಜೊತೆಗೆ, ಜಾನುವಾರುಗಳಿಗೆ ಸಮರ್ಕ ನೀರಿನ ವ್ಯವಸ್ಥೆ ಕಲ್ಪಿಸುವುದಕ್ಕೂ ಆದ್ಯತೆ ನೀಡಬೇಕು ಎಂದು ಹೇಳಿದರು.ಸಭೆಯಲ್ಲಿ ಉಪವಿಭಾಗಾಧಿಕಾರಿ ಸುಭಾಸ ಸಂಪಗಾವಿ, ತಹಶೀಲ್ದಾರ ರಾಜೇಶ ಬುರ್ಲಿ, ತಾಪಂ ಸಹಾಯಕ ನಿರ್ದೇಶಕ ಶಿವಾನಂದ ಶಿರಗಾಂವೆ, ಕಂದಾಯ ನೀರೀಕ್ಷಕ ಡಿ.ಎಸ್. ವಂಟಗೂಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 