ಮೈಸೂರು,.21 ಹಲ್ಲೆಗೆ ಒಳಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಚೇತರಿಸಿಕೊಳ್ಳುತ್ತಿದ್ದು, ಇಂದು ಅಥವಾ ನಾಳೆ ಐಸಿಯುನಿಂದ ವಾಡರ್್ಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ನಾಲ್ಕನೆ ದಿನವು ಐಸಿಯೂನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಮರ್ಪಕವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿರುವ ತನ್ವೀರ್ ಸೇಠ್ ಅವರನ್ನು ಇಂದು ಅಥವಾ ನಾಳೆ ವಾಡರ್್ ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಅವರಿಗೆ ದಿನದ 24 ಗಂಟೆ ಮೂರು ಪಾಳಿಗಳಲ್ಲಿ ಭದ್ರತೆ ಒದಗಿಸಲಾಗಿದೆ. ಭಾನುವಾರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತನ್ವೀರ್ ಸೇಠ್ ಗೆ ಯುವಕನೋರ್ವ ಕುತ್ತಿಗೆಗೆ ಚಾಕು ಹಾಕಿದ್ದ. ಈ ಘಟನೆಯ ಹಿನ್ನೆಲೆಯಲ್ಲಿ ಬುಧವಾರ ಅವರ ಹಾಲಿ ಗನ್ಮ್ಯಾನ್ ಫೈರೋಜ್ ಖಾನ್ನನ್ನು ಅಮಾನತು ಮಾಡಲಾಗಿತ್ತು. ಈಗ ತನ್ವೀರ್ ಸೇಠ್ ಅವರಿಗೆ ಭದ್ರತೆ ಹೆಚ್ಚಿಸಲಾಗಿದೆ.