ಅಡುಗೆ ಅನಿಲ, ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರುದ್ದ ತಾರಾಸಿಂಗ್ ರಾಠೋಡ ಆಕ್ರೋಶ
Tarasingh Rathod's anger against the increase in cooking gas, petrol-diesel prices
ಲೋಕದರ್ಶನ ವರದಿ
ಗಜೇಂದ್ರಗಡ 16 : ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 3 , ಮತ್ತು ಸಿಎನ್ಜಿ ಬೆಲೆ 3 ಹಾಗೂ ಅಡುಗೆ ಅನಿಲದ ಬೆಲೆಗಳು ಸೇರಿದಂತೆ ಇತರೆ ಅಗತ್ಯವುಗಳ ಬೆಲೆ ಹೆಚ್ಚಿಸುವ ಮೂಲಕ ಬಡವರ, ಮಧ್ಯಮ ವರ್ಗದ ಜನರನ್ನು ಕೇಂದ್ರ ಸರ್ಕಾರ ಶೋಷಿಸುತ್ತಿದೆ ಎಂದು ಗಜೇಂದ್ರಗಡ ತಾಲ್ಲೂಕು ಬಂಜಾರ ಸಮಾಜದ ಹಿರಿಯ ಮುಖಂಡ ತಾರಾಸಿಂಗ್ ರಾಠೋಡ ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಳೆದ ಹಲವು ವರ್ಷಗಳಿಂದ ಜಾಗತಿಕ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಅದರ ಲಾಭವನ್ನು ಗ್ರಾಹಕರಿಗೆ ನೀಡಿಲ್ಲ. ಇದೀಗ ಹೆಚ್ಚು ಶುಲ್ಕ ವಿಧಿಸಿ ಗ್ರಾಹಕರ ನಿತ್ಯ ಬದುಕಿನ ಜೊತೆಗೆ ಆಟವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 2014ಕ್ಕೂ ಮೊದಲು ?413 ಇದ್ದ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ಈಗ 1,000 ದಾಟಿದೆ. ನಿತ್ಯದ ಬೆಲೆ ಹೆಚ್ಚಳಕ್ಕೂ ಕಾರಣವಾಗಿದೆ. ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ ಎಂದು ದೂರಿದರು.
ಬೆಲೆ ಏರಿಕೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆಯಾಗಿದೆ. ಅಂತರರಾಷ್ಟ್ರೀಯ ಬಿಕ್ಕಟ್ಟಿನ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಮೋದಿಯವರು ವಿಫಲರಾಗಿದ್ದಾರೆ. ಎಲ್ಲಾಕಡೆ ಚುನಾವಣೆಗಳು ಮುಗಿದಿವೆ, ಮೋದಿಯವರ ಚೇತರಿಕೆ ಪ್ರಾರಂಭವಾಗಿದೆ ಮತ್ತು ಜನರ ಬದುಕು ದುಸ್ತರ ಆರಂಭವಾಗಿದೆ. ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ದರ ಹೆಚ್ಚಳ ಮಾಡುವ ನೀರೀಕ್ಷೆ ಇತ್ತು ಎಂದರು.
ನರೇಂದ್ರ ಮೋದಿ ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ತೈಲ ದರಗಳನ್ನು ಹೆಚ್ಚಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರವು ಈಗಾಗಲೇ ಹಣದುಬ್ಬರ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚಗಳಿಂದ ಬಳಲುತ್ತಿರುವ ನಾಗರಿಕರ ಮೇಲೆ ಹೆಚ್ಚುವರಿ ಆರ್ಥಿಕ ಒತ್ತಡವನ್ನು ಹೇರುತ್ತಿದೆ ಎಂದರು.
ಎಲ್ಪಿಜಿ ಸಿಲಿಂಡರ್ ಪೂರೈಕೆಯ ವ್ಯತ್ಯಯದಿಂದ ಪರದಾಡುತ್ತಿರುವ ಜನರನ್ನು ಬೆಲೆ ಏರಿಕೆ ಮತ್ತಷ್ಟು ಸಂಕಷ್ಟಕ್ಕೆ ದೂಡಲಿದೆ. ಈ ಬೆಲೆ ಏರಿಕೆ ಹಾಗೂ ಬಂಗಾರದ ಮೇಲೆ ತೆರಿಗೆ ಹೆಚ್ಚುವರಿಯು ಜನಸಾಮಾನ್ಯರ ಮೇಲೆ ಪರಿಣಾಮ ಬೀರಲಿದ್ದು, ಕಾರ್ಮಿಕರು, ರೈತರು, ಬಡವರ ಬದುಕು ದುಸ್ತರವಾಗಲಿದೆ ಎಂದರು. ಈ ಕೂಡಲೆ ಬೆಲೆ ಏರಿಕೆಯನ್ನು ಹಿಂಪಡೆದು ಜನರ ಸಾಮಾನ್ಯ ಬದುಕಿಗೆ ಅನಕೂಲತೆ ಮಾಡಿಕೊಡಬೇಕು ಇಲ್ಲವಾದರೆ ದೇಶಾದ್ಯಂತ ಜನರು ಕೇಂದ್ರ ಸರ್ಕಾರದ ವಿರುದ್ದ ಹೋರಾಟಕ್ಕೆ ಮುಂದಾಗುತ್ತಾರೆ ಎಂದು ಎಚ್ಚರಿಸಿದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 