ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಕ್ಕೆ ತೆರಿಗೆ ವಂಚನೆ : ವಿವಿಧ ವ್ಯಾಪಾರಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಮನವಿ
Tax evasion to the government in Koppal district: Appeal demanding strict action against various bus
ಕೊಪ್ಪಳ 10: ಏಸರ್ಕಾರಕ್ಕೆ ತೆರಿಗೆ ವಂಚನೆ : ವಿವಿಧ ವ್ಯಾಪಾರಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಜಿಲ್ಲಾಧಿಕಾರಿ ಸುರೇಶ್ ಬಿ.ಇಟ್ನಾಳ ಅವರ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಜನಪರ ಸಂಘಟನೆಗಳ ಒಕ್ಕೂಟ ಮತ್ತು ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ನಮ್ಮ ಕೊಪ್ಪಳ ಜಿಲ್ಲೆಯ ಬಹುತೇಕ ವಿವಿಧ ಅಂಗಡಿ-ಮುಂಗಟ್ಟುಗಳಲ್ಲಿ ವ್ಯಾಪಾರಸ್ಥರು ಗ್ರಾಹಕರಿಗೆ ಅಧಿಕೃತ ರಶೀದಿಯನ್ನು ನೀಡುತ್ತಿಲ್ಲ.ಗ್ರಾಹಕರು ರಶೀದಿ (ಬಿಲ್) ಕೇಳಿದರೂ ಸಹ "ಸರಕುಗಳ ಮೇಲೆ ತೆರಿಗೆ ಹೆಚ್ಚಾಗುತ್ತದೆ" ಎಂಬ ನೆಪವೊಡ್ಡಿ ಅಥವಾ ಸಣ್ಣ ಕೈಬರಹದ ಚೀಟಿ ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ತೆರಿಗೆ ಚೂರಿ ನಡೆಸಿದ್ದಾರೆ.
ರಶೀದಿ (ಬಿಲ್) ನೀಡದಿದ್ದರೆ ಆಗುವ ತೊಂದರೆಗಳು. * ಸರ್ಕಾರಕ್ಕೆ ಸೇರಬೇಕಾದ ತೆರಿಗೆ ಹಣ ಸೋರಿಕೆಯಾಗುತ್ತಿದೆ. * ವಸ್ತುಗಳಲ್ಲಿ ದೋಷ ಕಂಡುಬಂದಾಗ ಗ್ರಾಹಕರಿಗೆ ಬದಲಾಯಿಸಲು ಅಥವಾ ವಾರಂಟಿ ಪಡೆಯಲು ಸಾಧ್ಯವಾಗುತ್ತಿಲ್ಲ. * ಇದು ಗ್ರಾಹಕ ಸಂರಕ್ಷಣಾ ಕಾಯ್ದೆಯ ನೇರ ಉಲ್ಲಂಘನೆಯಾಗಿದೆ. ಅನೇಕ ವ್ಯಾಪಾರಸ್ಥರು ಅಧಿಕೃತ ರಶೀದಿ ಇದ್ದರೂ ಗ್ರಾಹಕರಿಗೆ ಕೊಡುವುದಿಲ್ಲ. ಇನ್ನೂ ಕೆಲವರು ರಶೀದಿಪುಸ್ತಕಗಳನ್ನೇ ತಯಾರಿಸಿಲ್ಲ. ಇವು ನೋಡಿಕೊಳ್ಳದ. ಕರ್ತವ್ಯ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಜನರ ತೆರಿಗೆಯ ಹಣದಿಂದ ಪಗಾರ ಪಡೆಯುವ ಅಧಿಕಾರಿಗಳು ಕೇವಲ ಸಹಿ ಹಾಕಿ ಕಛೇರಿಗಳ ದಾಖಲೆಗಳಲ್ಲಿ ಮಾತ್ರ ಸೇವೆ ಸಲ್ಲಿಸುತ್ತಾ ಕೋಟ್ಯಾಂತರ ರೂಪಾಯಿಗಳನ್ನು ಸರ್ಕಾರಕ್ಕೆ ಸಲ್ಲಬೇಕಾದ ತೆರಿಗೆ ವಂಚನೆ ಮಾಡುತ್ತಿದ್ದಾರೆ.
ತೆರಿಗೆ ವಂಚನೆ(ಟೆಕ್ಸ ಚೂರಿ) ನಡೆಸುವುದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಎಲ್ಲಾ ಅಂಗಡಿಗಳಲ್ಲಿ ದರ ಪ್ರದರ್ಶನ ಮತ್ತು ದಾಸ್ತಾನು ಘೋಷಣೆ ಫಲಕ ಕಡ್ಡಾಯವಾಗಿ ಹಾಕಬೇಕು.ತೂಕ ಮತ್ತು ಅಳತೆಯಲ್ಲಿ ನಡೆಯುವ ಗೋಲ್ಮಾಲ್ ತಡೆಯಬೇಕು.ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಹೋಟೆಲಗಳು.ಬಟ್ಟೆ.ಕಿರಾಣಿ ಸೇರಿದಂತೆ ವಿವಿಧ ವ್ಯಾಪಾರಸ್ಥರ ಅಂಗಡಿಗಳಿಗೆ ಅನೀರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಾನೂನಾತ್ಮಕ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಬೇಕು. ಜಿಲ್ಲೆಯ ಎಲ್ಲಾ ವ್ಯಾಪಾರಸ್ಥರು ಪ್ರತಿಯೊಂದು ಗ್ರಾಹಕರಿಗೂ ಕಡ್ಡಾಯವಾಗಿ ರಶೀದಿ(ಬಿಲ್)ನೀಡುವಂತೆ ಆದೇಶಿಸಬೇಕೆಂದು ಮತ್ತು ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತೇವೆ
ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್. ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟ(ಐ.ಎಫ್.ಟಿ.ಯು ಸಂಚಾಲಕ ಬಸವರಾಜ್ ಶೀಲವಂತರ್. ಗಿಣಿಗೇರಾ ನಾಗರಿಕ ಹೋರಾಟ ಸಮಿತಿ ಸಂಚಾಲಕ ಮಂಗಳೇಶ ರಾಥೋಡ್. ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣವರ್. ಮೊಹಮ್ಮದ್ ಗೌಸ್ ನೀಲಿ ಮುಂತಾದವರು ತಿಳಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 