ಶಿಕ್ಷಕರ ಸೇವೆ ಸಮಾಜ ನಿರ್ಮಾಣಕ್ಕೆ ಅಮೂಲ್ಯ: ಮಲ್ಲಿಕಾರ್ಜುನ ಮಹಾಸ್ವಾಮೀಜಿ
Teacher's service is invaluable for social development: Mallikarjuna Mahaswamiji
ಲೋಕದರ್ಶನ ವರದಿ
ಕಾಗವಾಡ ಸೆ.5: ರಾಷ್ಟ್ರದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖವಾಗಿದ್ದು, ಶಿಕ್ಷಕರ ಸೇವೆ ಅತ್ಯಂತ ಪವಿತ್ರವಾದದ್ದು ಎಂದು ಬಿಳಿಗಿರಿರಂಗನ ಬೆಟ್ಟದ ವಿಶ್ವಶಾಂತಿ ನಿಕೇತನದ ಪ.ಪೂ. ಶಾಂತ ಮಲ್ಲಿಕಾರ್ಜುನ ಮಹಾಸ್ವಾಮೀಜಿ ಹೇಳಿದರು.
ಐನಾಪುರ ಪಟ್ಟಣದ ಸಿದ್ದೇಶ್ವರ ಸಮುದಾಯ ಭವನದಲ್ಲಿ ನಡೆದ ಕಾಗವಾಡ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಅವರು, ತಾಯಿಯೇ ಮೊದಲ ಗುರುವಾಗಿದ್ದು, ವ್ಯಕ್ತಿತ್ವ ರೂಪಿಸುವಲ್ಲಿ ತಾಯಿಯ ಪಾತ್ರದಷ್ಟೇ ಶಿಕ್ಷಕರ ಪಾತ್ರವೂ ಮಹತ್ವದ್ದಾಗಿದೆ ಎಂದರು. ಶಿಕ್ಷಕರು ಮಕ್ಕಳಿಗೆ ಜ್ಞಾನ ನೀಡುವುದರ ಜೊತೆಗೆ ಅವರನ್ನು ಉತ್ತಮ ಪ್ರಜೆಗಳಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ರವೀಂದ್ರ ಹಾದಿಮನಿ ಮಾತನಾಡಿ, ಶಿಕ್ಷಕ ವೃತ್ತಿ ಎಲ್ಲ ವೃತ್ತಿಗಳಿಗಿಂತ ಪವಿತ್ರವಾದದ್ದು. ಶಿಕ್ಷಕರು ತಮ್ಮ ಸಂಪೂರ್ಣ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಾರೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಿಗರಾಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಪಾಂಡುರಂಗ ಮಧಭಾವಿ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಭಾರತ ಬಿಲವಡಿ ನಿರೂಪಿಸಿದರು. ಶಿಕ್ಷಣ ಸಂಯೋಜಕ ಶ್ರೀಶೈಲ ಮಾಳಿ ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಹಾಗೂ ತಾಲೂಕಿನ ಶಿಕ್ಷಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 