ಶಿಕ್ಷಕಿ ದೀಪಿಕಾ ಹಾಲಪ್ಪನವರ ಗೆ “ವಿದ್ಯಾ-ವಾರಿಧಿ” ಪ್ರಶಸ್ತಿ
Teacher Deepika Halappa receives “Vidya-Varidhi” award
ಲೋಕದರ್ಶನ ವರದಿ
ಬೆಳಗಾವಿ 29 : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಜಿಲ್ಲಾ ಘಟಕ, ಬೆಳಗಾವಿ ಮತ್ತು ಅಖಿಲ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ, ಜಿಲ್ಲಾ ಘಟಕ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಹಾಲ್ ನಲ್ಲಿ ಶನಿವಾರ ಜರುಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸೇವೆಯನ್ನು ಗಮನಿಸಿ ಚಚಡಿ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕಿ ದೀಪಿಕಾ ಹಾಲಪ್ಪನವರ ಇವರಿಗೆ ಜಿಲ್ಲಾ ಮಟ್ಟದ “ವಿದ್ಯಾ ವಾರಿಧಿ” ಪ್ರಶಸ್ತಿಯನ್ನು ನೀಡಿ ಅಭಿನಂದಿಸಿ ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಡಿ.ಡಿ.ಪಿ.ಐ. ಲೀಲಾವತಿ ಹಿರೇಮಠ, ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಪ್ರೀತಿ ಕಾಮಕರ, ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ, ಜಿಲ್ಲಾ ಅಧ್ಯಕ್ಷ ಜಯಕುಮಾರ ಹೆಬಳಿ, ಪ್ರಧಾನ ಕಾರ್ಯದರ್ಶಿ ರಮೇಶ ಗೋಣಿ, ಶಿಕ್ಷಕರ ಸಂಘದ ಎಂ.ಎಫ್. ಸಿದ್ದನಗೌಡರ, ಮಲ್ಲಿಕಾರ್ಜುನ ಕೋಳಿ ಒಳಗೊಂಡಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರ ಸಂಘದ ಪಧಾಧಿಕಾರಿಗಳು, ಜಿಲ್ಲೆಯ ಶಿಕ್ಷಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 