ಶಿಕ್ಷಕಿ ಲತಾಗೆ ವಿಜ್ಞಾನ ಚೈತನ್ಯಶ್ರೀ ಪ್ರಶಸ್ತಿ
Teacher Latha gets Vigyan Chaitanya Shri Award
ಹೂವಿನ ಹಡಗಲಿ 30: ದೊಡ್ಡಬಳ್ಳಾಪುರದಲ್ಲಿ ಕರ್ನಾಟಕ ವೈಜ್ಞಾನಿಕ ಸಂಶೋಧನಾಪರಿಷತ್ ನಿಂದ ನೀಡುವ ನೀಡುವ 2025-26 ನೇ ಸಾಲಿನ ವಿಜ್ಞಾನ, ಸಮಾಜ ಸೇವೆಗೆ ರಾಜ್ಯ ಮಟ್ಟದ ಚೈತನ್ಯಶ್ರೀ ಪ್ರಶಸ್ತಿಗೆ ನಾಗತಿ ಬಸಾಪುರ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕಿ ಎಂ.ಎಲ್.ಲತಾ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವಿಜಯನಗರ ಜಿಲ್ಲಾಧ್ಯಕ್ಷ ದೇವರಾಜ್ ತಿಳಿಸಿದ್ದಾರೆ.
ಇದೇ ತಿಂಗಳು ಯಾದಗಿರಿಯಲ್ಲಿ ನಡೆಯುವ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಸ್ವೀಕರಿಸುವರು.
ಲತಾ ರವರ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ. ಪೂಜಾರ ಕ್ಷೇತ್ರ ಸಮನ್ವಯಾಧಿಕಾರಿ ಎ, ಕೋಟೆಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ. ಹನುಮಂತಪ್ಪ, ತಾಲೂಕು ದೈಹಿಕ ಪರೀವೀಕ್ಷಕ ರಫಿ ಆಹಮದ್ ಖವಾಸ್ ಸರ್ಕಾರಿ ನೌಕರರ ಸಂಘದ ಅಧ್ಯಕ್ಷಎ, ಕೊಟ್ರ ಗೌಡ, ತಾಲೂಕು ಪ್ರೌಢಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಜಿ.ಎಂ. ಕಾಂತೇಶ್, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ. ಶಿವಲಿಂಗಪ್ಪ, ರಾಜ್ಯ ಸಹ ಕಾರ್ಯದರ್ಶಿ ಗಡ್ಡಿ ಶಿವಕುಮಾರ್, ನಾಗತಿ ಬಸಾಪುರ ಸರ್ಕಾರಿ ಪ್ರೌಢಶಾಲೆ ಮುಖ್ಯ ಗುರು ಕಂಠಿ ಪ್ರಕಾಶ್, ಶಿಕ್ಷಕ ಸಿಬ್ಬಂದಿ ಅಭಿನಂದಿಸಿದ್ದಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 