ಶಿಕ್ಷಕ ಪ್ರಕಾಶ್ ಓಟದ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
Teacher Prakash selected for state level in running competition
ಲೋಕದರ್ಶನ ವರದಿ
ವಿಜಯನಗರ 10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ವಿಜಯನಗರ ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಕಾಶ್ ಶಿಕ್ಷಕರು 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು (50ವರ್ಷ ದಿಂದ 60ವರ್ಷದ ವಯೋಮಿತಿಯ ಪುರುಷರ ವಿಭಾಗದಲ್ಲಿ) 6ನೇ ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನಗೌಡ.ಜಿ. ಹಾಗೂ ರಾಜ್ಯ ಪರಿಷತ್ ಸದಸ್ಯರಾದ ರಾಘವೇಂದ್ರ ಹೆಗಡೆಹಾಳ್, ಖಜಾಂಚಿ ಮಲ್ಲೇಶಪ್ಪ, ಕಾರ್ಯದರ್ಶಿ ಟಿ.ಪಂಪಣ್ಣ ಹಾಗೂ ಕಡ್ಲಿವೀರಭದ್ರೇಶ, ಮಾರ್ಗದಪ್ಪ, ರಾಜೀವ್, ಆಂದಾನಪ್ಪಗೌಡ, ಬಸವರಾಜ.ಕೆ. ಸುಧಾದೇವಿ, ಲತಾ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ಶ್ರೀಕಾಂತ ವಾಲ್ಮೀಕಿ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಾಕೀರ್, ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದರು.
ಸಾಧಕ ಶಿಕ್ಷಕನಿಗೆ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಾಲೂಕು ನೌಕರರ ಸಂಘ ಹಾಗೂ ಕ.ಸ.ಪಾ ತಾಲೂಕು ಘಟಕ ಹೊಸಪೇಟೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಕುಬಾಳು ಮುಖ್ಯಗುರುಗಳು ಹಾಗೂ ಸಹಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷರು, ಹರ್ಷ ವ್ಯಕ್ತಪಡಿಸಿ ರಾಜ್ಯಮಟ್ಟದ ಕ್ರೀಡಾ ಕೂಟದಲ್ಲಿ ವಿಜಯ ಪತಾಕೆ ಹಾರಿಸಿ ಜಿಲ್ಲೆಗೆ ಕೀರ್ತಿ ತರಲೆಂದು ಶುಭ ಹಾರೈಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 