ಶಿಕ್ಷಕಿ ಸಲೀಮಾ ಬೇಗಂ ಪಠಾಣಗೆ ಜಿಲ್ಲಾ ಅತ್ಯುತ್ತಮ ಪ್ರಶಸ್ತಿ ಪ್ರದಾನ
Teacher Salima Begum Pathan presented with the District Excellence Award
ಕೊಪ್ಪಳ 7: ಶಾಲಾ ಶಿಕ್ಷಣ ಇಲಾಖೆ ಮತ್ತು ಶಿಕ್ಷಕರ ಕಲ್ಯಾಣ ನಿಧಿ ಇವರು ಕೊಡಲ್ಪಡುವ 2025-26ನೆ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕೊಪ್ಪಳ ನಗರದ ದಿಡ್ಡಿಕೇರಿ ಉರ್ದು ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಸಲೀಮಾಬೇಗಂ ಪಠಾಣ್ ರವರು ಆಯ್ಕೆಗೊಂಡಿದ್ದು, ಅವರಿಗೆ ಶನಿವಾರದಂದು ನಗರದ ಸಾಹಿತ್ಯ ಭವನದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಲೀಮಾ ಬೇಗಂ ರವರು 30 ವಿದ್ಯಾರ್ಥಿಗಳಿದ್ದ ದಿಡ್ಡಿಕೇರಾ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 135ಕ್ಕಿಂತ ಹೆಚ್ಚು ಮಕ್ಕಳ ದಾಖಲಾತಿ ಹೊಂದುವಂತೆ ಮಾಡಿದ್ದಾರೆ. ಪ್ರಸ್ತುತ ಇವರು ಪ್ರಭಾರಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮನೆಮನೆ ಭೇಟಿ, ಪಾಲಕರನ್ನು ಮನವೊಲಿಸಿ, ಪ್ರತೀ ವರ್ಷ 30-40 ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರ ಪ್ರದೇಶದಲ್ಲಿ ದಾಖಲೆ ಇಳಿಮುಖವಾಗುತ್ತಿರುವ ಸಂದರ್ಭದಲ್ಲಿ, ದಾಖಲಾತಿ ನಿರಂತರ ಏರಿಕೆಯಾಗುತ್ತಿರುವ ಹೆಗ್ಗಳಿಕೆ ಈ ಶಾಲೆಯದು. ಪ್ರತಿ ವರ್ಷ ತಮ್ಮ ಸ್ವಂತ ಹಣದಿಂದ ಒಂದನೇ ತರಗತಿ ಮಕ್ಕಳಿಗೆ ನೋಟ್ಬುಕ್, ಪೆನ್, ಪೆನ್ಸಿಲ್ ಹಾಗೂ ಕಲಿಕಾ ಸಾಮಗ್ರಿಗಳು ಸ್ಕೂಲ್ ಬ್ಯಾಗ ನೀಡುತ್ತಾ ಬಂದಿದ್ದಾರೆ. ಶಾಲೆಯ ಸಹ ಶಿಕ್ಷಕರ ಜೊತೆಗೂಡಿ ಶಾಲೆಯ ಪ್ರಗತಿಗೆ ಶ್ರಮಿಸುತ್ತಿದ್ದಾರೆ.ಪ್ರಶಸ್ತಿಗೆ ಆಯ್ಕೆ ಯಾಗಿದ್ದಕ್ಕೆ ಶಾಲಾ ಸಿಬ್ಬಂದಿ, ಶಿಕ್ಷಕರು, ಸಂಘಟನೆಯ ಪ್ರಮುಖರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.ಸಮಾರಂಭದಲ್ಲಿ ಶಾಸಕ ಕೆ ರಾಘವೇಂದ್ರ ಹಿಟ್ನಾಳ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ್ ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಕೊಪ್ಪಳ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತ ಜಿಲ್ಲಾ ಸರ್ಕಾರಿ ನಗರಸಭೆ ಸದಸ್ಯರಾದ ಮುತ್ತಣ್ಣ ಕುಷ್ಟಗಿ,ನೌಕರರ ಸಂಘದ ಅಧ್ಯಕ್ಷ ನಾಗರಾಜ್ ಜುಮಣ್ಣನವರ್, ಶಾಲಾ ಉಪನಿರ್ದೇಶಕ ಸೋಮಶೇಖರ್ ಗೌಡ ಪಾಟೀಲ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹನುಮಂತಪ್ಪ ಹೆಚ್, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಶರಣಬಸನಗೌಡ ಪಾಟೀಲ್ ಕಾರ್ಯದರ್ಶಿ ಮಂಜುನಾಥ್, ಸಹ ಕಾರ್ಯದರ್ಶಿ ಬಸವರಾಜ್ ಕೊಮಲಾಪುರ, ತಾಲೂಕ ಅಧ್ಯಕ್ಷ ಹೊಳಿಬಸಯ್ಯ ಕೆ ಎಂ, ಕಾರ್ಯದರ್ಶಿ ಬಾಳಪ್ಪ ಕಾಳೆ, ಮತ್ತು ಪ್ರಾಣೇಶ್ ಪೂಜಾರಿ , ಪರಸಪ್ಪ ಕಮಲಿ, ದೇವರಾಜ್ ಎ .ಎಸ್. ಉರ್ದು ಸಂಘದ ಜಿಲ್ಲಾ ಅಧ್ಯಕ್ಷ ನಫೀಸ್ ಖಾನ್ ಪಠಾಣ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರು ಶಿಕ್ಷಕರ ಸಂಘದ ವಿವಿಧ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 