ಶಿಕ್ಷಕ ಸಂತೋಷಗೆ ಬಸವ ಚೇತನ ಪ್ರಶಸ್ತಿ ಪ್ರದಾನ
Teacher Santhosh was awarded the Basava Chetana Award
ಇಂಡಿ 07: ರವಿವಾರ ಜುಲೈ 6 ರಂದು ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಅಮ್ಮ ಫೌಂಡೇಶನ್ ವತಿಯಿಂದ ಜರುಗಿದ ರಾಜ್ಯ ಮಟ್ಟದ ಬಸವ ಸಂಸ್ಕೃತಿ ಉತ್ಸವ ಸಮಾರಂಭದಲ್ಲಿ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಬಂಡೆ ಅವರಿಗೆ ’ರಾಜ್ಯ ಮಟ್ಟದ ಬಸವ ಚೇತನ ಪ್ರಶಸ್ತಿ’ ಯನ್ನು ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಆಲಮೇಲ ವಿರಕ್ತಮಠದ ಜಗದೇವ ಮಲ್ಲಿ ಬೊಮ್ಮ ಸ್ವಾಮೀಜಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ವಿಜಯಾ ಕೋರಿಶೆಟ್ಟಿ, ಧಾರವಾಡ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಪ್ರಭುಗೌಡ ಲಿಂಗದಳ್ಳಿ, ಎಸ್ ಎಂ ಪಾಟೀಲ ಗಣಿಹಾರ, ಎ ಎಂ ತಾಂಬೋಳಿ, ಅಮ್ಮ ಫೌಂಡೇಶನ್ ಸಂಚಾಲಕ ಕಬೂಲ ಕೊಕಟನೂರ ಸೇರಿದಂತೆ ಅನೇಕ ಗಣ್ಯರು ಪ್ರಶಸ್ತಿ ವಿತರಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 