ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿನಿಯರ ಸಾಧನೆಗೆ ಮುಖ್ಯ: ಕುಲಸಚಿವ
Teachers' guidance crucial for students' achievements: Registrar
ಲೋಕದರ್ಶನ ವರದಿ
ವಿಜಯಪುರ 07 : ವಿದ್ಯಾರ್ಥಿನಿಯರ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ. ವಿದ್ಯಾರ್ಥಿನಿಯರು ಮುಂದಿನ ದಿನಗಳಲ್ಲಿ ಸರ್ಕಾರಿ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಶಿಕ್ಷಕರ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಬಹುಮುಖ್ಯವಾಗಿದೆ ಎಂದು ಕುಲಸಚಿವ ಡಾ. ವಿಜಯಕುಮಾರ ಬಿ. ಅಜೂರ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಸೆ. 5ರಂದು ಸಿಂಡಿಕೇಟ್ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣನವರ, ಶಿಕ್ಷಕರು ದೇಶದ ಏಳಿಗೆಗಾಗಿ ಶ್ರಮಿಸುವುದರ ಜೊತೆಗೆ ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು. ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಎಂ. ನಾಗರಾಜ ಮಾತನಾಡಿ, ಶಿಕ್ಷಕರು ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳ ಕುರಿತು ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ಮೇಲಿನ ಅಪಾರ ಗೌರವ ಮತ್ತು ಪ್ರೀತಿಯ ಸಂಕೇತವಾಗಿ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ.
ಸಮಾಜದ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಜ್ಞಾನವಂತರನ್ನು ರೂಪಿಸುವ ಮೂಲಕ ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು. ಕುಲಪತಿಗಳ ಸಂದೇಶ: ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಶಿಕ್ಷಣ ಜ್ಯೋತಿ ಬೆಳಗಿಸುವಲ್ಲಿ ಶಿಕ್ಷಕರು ವಹಿಸುತ್ತಿರುವ ಪಾತ್ರ ಮಹತ್ವದ್ದಾಗಿದೆ. ವಿಶ್ವವಿದ್ಯಾನಿಲಯದ ಶಿಕ್ಷಕರ ತಂಡವು ಬೋಧನಾ ಕಾರ್ಯದಲ್ಲಿ ಸಮರಾ್ಣ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವುದು ಸಂತಸದ ಸಂಗತಿ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ನೀಡಿದ ಸಂದೇಶದಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಕುಲಪತಿಗಳ ಸಂದೇಶ ಪ್ರಸ್ತುತಪಡಿಸಲಾಯಿತು. ಕಾರ್ಯಕ್ರಮದ ಸಂಯೋಜಕ ಪ್ರೊ.ವೆಂಕೋಬ ನಾರಾಯಣಪ್ಪ ಸ್ವಾಗತಿಸಿದರು. ವಿಜಯಕುಮಾರ ಹಿರೇಮಠ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 