ಮಕ್ಕಳ ಭವಿಷ್ಯ ಉಜ್ವಲ ಗೊಳ್ಳಲು ಶಿಕ್ಷಕರ ಪರಿಶ್ರಮ ಅಗತ್ಯ-ಪಟೇಲ
Teachers' hard work is essential for a bright future for children - Patel
ಮಕ್ಕಳ ಭವಿಷ್ಯ ಉಜ್ವಲ ಗೊಳ್ಳಲು ಶಿಕ್ಷಕರ ಪರಿಶ್ರಮ ಅಗತ್ಯ-ಪಟೇಲ
ಕೋಪ್ಪಳ 10 : ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಅವರಿಗೆ ಉತ್ತಮ ಸಂಸ್ಕಾರ ಕಲಿಸಿಕೊಟ್ಟು ಒಟ್ಟಾರೆ ಮಕ್ಕಳ ಭವಿಷ್ಯ ಉಜ್ವಲ ಗೊಳ್ಳಲು ಶಿಕ್ಷಕರ ಪರಿಶ್ರಮ ಹೆಚ್ಚಾಗಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.ಅವರು ನಗರದ ಸಿ ಪಿ ಎಸ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಎಲ್ ಕೆ ಜಿ ಮತ್ತು ಯು ಕೆ ಜಿ ಮಕ್ಕಳಿಗೆ ಕಲಿಕಾ ಸಾಮಗ್ರಿ ಹಾಗು ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ವಿಶೇಷ ಆಮಂತ್ರಿತರಾಗಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು, ಮುಂದುವರೆದು ಮಾತನಾಡಿ ಎಲ್ಲಾ ಕ್ಷೇತ್ರದ ಅಭಿವೃದ್ಧಿ ಶಿಕ್ಷಣ ರಂಗದಲ್ಲಿ ಅಡಗಿದೆ ,ಮೊದಲು ನಾವು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾಗಿದೆ ಎಂದು ಹೇಳಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರೆಲ್ಲರಿಗೂ ಅಭಿನಂದಿಸಿದ ಅವರು ಡಾ, ರಾಧಾಕೃಷ್ಣನ್ ರವರ ಆದರ್ಶ ಪ್ರತಿಯೊಬ್ಬರು ನಮ್ಮ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಮ್ಮ ಬದುಕು ಕಟ್ಟಿಕೊಳ್ಳಬೇಕು ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು, ಸಮಾರಂಭದಲ್ಲಿ ನಗರಸಭೆಯ ಸದಸ್ಯರಾದ ಅಜೀಮ್ ಅತ್ತಾರ್, ಅಕ್ಬರ್ ಪಾಷಾ ಪಲ್ಟನ್, ರಹೀಮ್ ಮಕಾನ್ ದಾರ, ಉದ್ಯಮಿ ಪದಂ ಚಂದ್ ಮೆಹ್ತಾ ,ಮಿಸಸ್ ಮೆಹತ ಶಾಲೆಯ ಮುಖ್ಯ ಶಿಕ್ಷಕ ಗುಲಾಂ ಹುಸೇನಿ, ಶಿಕ್ಷಕರಾದ ಆಬೀರ್ ಆತ್ತಾರ್, ಸೇರಿದಂತೆ ವಿದ್ಯಾರ್ಥಿಗಳ ಪಾಲಕರು ಶಾಲೆಯ ವಿದ್ಯಾರ್ಥಿಗಳು ಸಹ ಶಿಕ್ಷಕರು ಕಾರ್ಯ ಕ್ರಮದಲ್ಲಿ ಪಾಲ್ಗೊಂಡಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 