ಆತ್ಮಹತ್ಯೆ ತಡೆಯುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಡಾ. ಅಭಯ ಪಾಟೀಲ
Teachers' role is important in preventing suicide: Dr. Abhaya Patil
ಬೆಳಗಾವಿ 03: ನಗರದ ಪ್ರತಿಷ್ಠಿತ ಆರಿ್ಪ.ಡಿ. ಮಹಾವಿದ್ಯಾಲಯದಲ್ಲಿ ನಡೆದ "ಮಾನಸಿಕ ಆರೋಗ್ಯ ಹಾಗೂ ಆತ್ಮಹತ್ಯೆ ತಡೆಗಟ್ಟುವಿಕೆ" ಕುರಿತು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಗರದ ಆರಿ್ಪ.ಡಿ. ಮಹಾವಿದ್ಯಾಲಯದಲ್ಲಿ "ಮಾನಸಿಕ ಆರೋಗ್ಯ ಹಾಗೂ ಆತ್ಮಹತ್ಯೆ ತಡೆಗಟ್ಟುವಿಕೆ" ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಅಭಯ ಪಾಟೀಲ ಅವರು ಬದುಕು ಸುಂದರವಾಗಿದ್ದು ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆಗೆ ಕೈ ಹಾಕುವ ನಿರ್ಧಾರ ತಪ್ಪು ಎಂದು ಹೇಳುತ್ತಾ ಆತ್ಮಹತ್ಯೆ ತಡೆಯುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ನುಡಿದರು. ಎನ್.ಎಸ್.ಎಸ್. ಘಟಕದ ಅಧಿಕಾರಿಯಾದ ಪ್ರೊ. ಇಂದಿರಾ ಹೋಳಕರ ಪ್ರಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಕೊನೆಗೆ ಆತ್ಮಹತ್ಯೆ ತಡೆಗೆ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು. ಇದರ ನಂತರ ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಇದರಲ್ಲಿ ಸುಮಾರು 20 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ನಿರ್ಣಾಯಕರಾಗಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಎಚ್. ಬಿ. ಕೋಲ್ಕಾರ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಡಾ. ಶರಯೂ ಪೋಟ್ನೀಸ್ ಆಗಮಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 