ಶಿಕ್ಷಕರ ನಿಸ್ವಾರ್ಥ ಸೇವೆ ಸ್ಮರಣೀಯ: ಶಾಸಕ ಯಾಸೀರ್ ಅಹ್ಮದ್ಖಾನ್ ಪಠಾಣ್
Teachers' selfless service is memorable: MLA Yasir Ahmed Khan Pathan
ಶಿಗ್ಗಾವಿ, ಸೆ. 07: ಅಕ್ಷರ ಜ್ಞಾನದ ಜೊತೆಗೆ ಜೀವನದ ಮೌಲ್ಯಗಳನ್ನು ಧಾರೆ ಎರೆಯುವ ಗುರುಪರಂಪರೆಯನ್ನು ಸ್ಮರಿಸುವ ಪವಿತ್ರ ದಿನವೇ ಶಿಕ್ಷಕರ ದಿನಾಚರಣೆ ಎಂದು ಶಾಸಕ ಯಾಸೀರ್ ಅಹ್ಮದ್ಖಾನ್ ಪಠಾಣ್ ಹೇಳಿದರು. ಪಟ್ಟಣದ ಸಂಗನಬಸವ ಮಂಗಲ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಅಮೂಲ್ಯವಾಗಿದೆ ಎಂದರು.
ಭಾರತದ ಹೆಮ್ಮೆಯ ತತ್ವಜ್ಞಾನಿ ಹಾಗೂ ದ್ವಿತೀಯ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳನ್ನು ಸ್ಮರಿಸಿದ ಅವರು, ಶಿಕ್ಷಕರು ಕೇವಲ ಪಠ್ಯಪುಸ್ತಕದ ಜ್ಞಾನವನ್ನು ಬೋಧಿಸುವವರಲ್ಲ. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಅವರಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಿ, ಬದಲಾಗುತ್ತಿರುವ ಆಧುನಿಕ ಜಗತ್ತಿಗೆ ತಕ್ಕಂತೆ ಅವರನ್ನು ಸಜ್ಜುಗೊಳಿಸುವ ನಿಜವಾದ ಶಿಲ್ಪಿಗಳು ಎಂದು ಹೇಳಿದರು.
ದೇಶದ ಪ್ರತಿಯೊಬ್ಬ ಪ್ರಜೆಯ ಯಶಸ್ಸಿನ ಹಿಂದೆ ಒಬ್ಬ ಶಿಕ್ಷಕರ ಶ್ರಮವಿರುತ್ತದೆ. ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಎಲ್ಲಾ ಶಿಕ್ಷಕರು ಹಾಗೂ ನಿವೃತ್ತ ಗುರುಗಳಿಗೆ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುವುದಾಗಿ ಶಾಸಕ ಪಠಾಣ್ ಹೇಳಿದರು. ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿದ್ದ ಸಂಗನಬಸವ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಅಧ್ಯಕ್ಷ ಎಸ್.ಎಫ್. ಮಣಕಟ್ಟಿ, ಜಿಲ್ಲಾ ಕೆಡಿಪಿ ಸದಸ್ಯ ಶಂಭು ಆಜೂರ, ರಾಜ್ಯ ಮಹಿಳಾ ಕಾರ್ಯದರ್ಶಿ ಪ್ರೇಮಾ ಪಾಟೀಲ, ಜಿಲ್ಲಾ ಮಹಿಳಾ ಅಧ್ಯಕ್ಷೆ ವಸಂತಾ ಬಾಗೂರ, ಜಿಲ್ಲಾ ಗ್ಯಾರಂಟಿ ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ಬಿಇಒ ಎಂ.ಬಿ. ಅಂಬಿಗೇರ, ನೌಕರರ ಸಂಘದ ಅಧ್ಯಕ್ಷ ಅರುಣ ಹುಡೇದಗೌಡ್ರ, ಕಸಾಪ ಅಧ್ಯಕ್ಷ ನಾಗಪ್ಪ ಬೆಂತೂರ, ಗೌಸಖಾನ್ ಮುನಶಿ, ಅಣ್ಣಪ್ಪ ಲಮಾಣಿ, ಮುನ್ನಾ ಲಕ್ಷ್ಮೇಶ್ವರ ಸೇರಿದಂತೆ ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 