ಶಿಕ್ಷಕರು ರಾಷ್ಟ್ರ ನಿರ್ಮಾಪಕರು: ಆಲಮೇಲ ವಿರಕ್ತ ಮಠದ ಶ್ರೀ
Teachers are nation builders: Sri of Alamela Virakta Math
ದೇವರಹಿಪ್ಪರಗಿ 28: ಶಿಕ್ಷಕರಾದವರು ಜವಾಬ್ದಾರಿ ಅರಿತುಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಈ ದೇಶ ಉದ್ಧಾರವಾಗುತ್ತದೆ. ಆ ದಿಶೆಯಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ ಎಂದು ಆಲಮೇಲ ವಿರಕ್ತ ಮಠದ ಶ್ರೀ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 8ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೂಡುಗೆ ಸಮಾರಂಭದ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿದ ಅವರು.ಸರಕಾರಿ ಶಾಲೆ ಗಳೆಂದರೆ ಮೂಗು ಮುರಿಯುವ ಈ ದಿನಗಳಲ್ಲಿ ನಾನಾ ಸುಧಾರಣಾ ಕ್ರಮಗಳಿಂದ ಶತಮಾನದ ಇತಿಹಾಸವಿರುವ ಹುಣಶ್ಯಾಳ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ತಾಲೂಕಿನ ಇತರ ಶಾಲೆಗಳಿಗೆ ಮಾದರಿಯಾಗಿದೆ.ಒಂದೇ ಕ್ಯಾಂಪಸ್ ನಲ್ಲಿ ಜಾತ್ಯತೀತವಾಗಿ ಕನ್ನಡ ಹಾಗೂ ಉರ್ದು ಮಾಧ್ಯಮದ ಶತಮಾನದ ಇತಿಹಾಸ ಇರುವ ಈ ಶಾಲೆಗೆ ಪ್ರೌಢಶಾಲೆ ಹಾಗೂ ಕಾಲೇಜ್ ನಿರ್ಮಾಣ ಮಾಡುವ ಕೆಲಸ ಆಗಬೇಕು.ಶಿಕ್ಷಣ ಇಲಾಖೆ ಅಧಿಕಾರಿಗಳು ಗ್ರಾಮೀಣ ಪ್ರದೇಶದ ಅದರಲ್ಲೂ ಎಸ್‌ಸಿ, ಒಬಿಸಿ ಹಾಗೂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸುತ್ತಿದ್ದಾರೆ.ದೇಶದ ವ್ಯವಸ್ಥೆಯಲ್ಲಿ ರೈತರು ಮಾತ್ರ ಪ್ರಾಮಾಣಿಕ ವ್ಯಕ್ತಿಗಳಾಗಿದ್ದಾರೆ. ಸೈನಿಕರು ನಮ್ಮ ದೇಶವನ್ನು ಸಂರಕ್ಷಣೆ ಮಾಡುತ್ತಿದ್ದರೆ, ಶಿಕ್ಷಕರು ಅಕ್ಷರಗಳನ್ನು ಕಲಿಸುವ ಮೂಲಕ ಸುಸಂಸ್ಕೃತ ವ್ಯಕ್ತಿಗಳನ್ನಾಗಿ ಮಾರ್ಾಡು ಮಾಡುತ್ತಿದ್ದಾರೆ, ವಿದ್ಯಾರ್ಥಿಗಳ ಈ ಶಾಲೆಯಲ್ಲಿ ಕಲಿತು ಗ್ರಾಮದ ಹಾಗೂ ದೇಶದ ಕೀರ್ತಿ ಹೆಚ್ಚಿಸಬೇಕು ಎಂದು ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ. ಸಿ ಅಧ್ಯಕ್ಷರಾದ ಸೋಮನಗೌಡ ಕೋಟಿಖಾನಿ ಹಾಗೂ ಮುಖ್ಯಗುರುಗಳಾದ ಮಡಿವಾಳಪ್ಪ ಹಂದಿಗನೂರ ವಹಿಸಿದ್ದರು.ಪ್ರಾಸ್ತಾವಿಕವಾಗಿ ಶಿಕ್ಷಕ ಬಿ.ಬಿ.ಕೋಟಿಖಾನಿ ಅವರು ಮಾತನಾಡಿ, ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು ತಿಳಿಸಿದರು.
ನಂತರ ವಿದ್ಯಾರ್ಥಿಗಳಿಂದ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಶರಣಪ್ಪ ಹಿಪ್ಪರಗಿ(ಪಡಶೆಟ್ಟಿ), ಶಂಕ್ರ್ಪ ಬಂಗಾರಗುಂಡ,ಎ.ಎ.ಮೋಮಿನ, ಗುತ್ತಪ್ಪಗೌಡ ಕೋಟಿಖಾನಿ, ಶಾಂತಪ್ಪ ಕೋಟಿಖಾನಿ, ಮಹಾಂತಯ್ಯ ಹಿರೇಮಠ, ನಿಂಗಣ್ಣ ಪಾಕಿ, ಪತ್ರಕರ್ತ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಬಿ.ಎಂ.ಭೋವಿ, ಶರಣಪ್ಪ ಮಾದರ,ಈರಣ್ಣ ಬಡಿಗೇರ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆ ಶಿಕ್ಷಕ ಸುರೇಶ ಭೋವಿ ಸ್ವಾಗತಿಸಿ, ವಂದಿಸಿದರು.
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 