ರಾಷ್ಟ ಪ್ರೇಮ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವ: ಶಾಸಕ ಸಿದ್ದು ಸವದಿ
Teachers play a crucial role in fostering patriotism: MLA Siddu Savadi
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 05 : ಶಿಕ್ಷಕರು ಸಮಾಜದ ಭವಿಷ್ಯ ರೂಪಿಸುವ ಪ್ರಮುಖ ಶಿಲ್ಪಿಗಳಾಗಿದ್ದು, ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ಜ್ಞಾನ ನೀಡುವುದಷ್ಟೇ ಅಲ್ಲದೆ, ಉತ್ತಮ ಸಂಸ್ಕಾರ, ಶಿಸ್ತು, ಮಾನವೀಯ ಮೌಲ್ಯಗಳು ಹಾಗೂ ಜವಾಬ್ದಾರಿಯುತ ನಾಗರಿಕತ್ವ ಹಾಗೂ ರಾಷ್ಟ ಪ್ರೇಮ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ರಾಮಪುರನ ದಾನೇಶ್ವರಿ ಸಮುದಾಯ ಭವನದಲ್ಲಿ ಜರುಗಿದ ರಬಕವಿ-ಬನಹಟ್ಟಿ ತಾಲೂಕಾ ಮಟ್ಟದ ಶಿಕ್ಷಕರ ದಿನೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,ಶಿಕ್ಷಕರ ಪರಿಶ್ರಮದಿಂದ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತಿದೆ.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಂಘಟನೆಯ ಪಾತ್ರ ಪ್ರಮುಖವಾಗಿದ್ದು. ಶಿಕ್ಷಕರು ಅವುಗಳನ್ನು ಸಮರ್ಥವಾಗಿ ಬಳಸಿಕೊಂಡು ಗುಣಮಟ್ಟದ ಶಿಕ್ಷಣ ನೀಡಬೇಕು.ಶಿಕ್ಷಕರಾದವರು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ,ಅವರಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜೊತೆಗೆ ಸ್ಪರ್ಧಾತ್ಮಕವಾಗಿ ಬೆಳೆಸುವ ಕಾರ್ಯ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ವಯೋ ನಿವೃತ್ತಿ ಹೊಂದಿದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವ ವಹಿಸಿದ್ದ ಹಳಿಂಗಳಿಯ ಕಮರಿಮಠದ ಪೂಜ್ಯ ಶರಣಬಸವ ದೇವರು ಆಶೀರ್ವಚನ ನೀಡಿದರು.ವೇದಿಕೆಯಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಾನಪ್ಪ ಹುಲಜತ್ತಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ,
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ಬಸಣ್ಣವರ, ಬಸವರಾಜ ಹಣಗಂಡಿ, ಕೆ.ಎಂ.ಕೋಲೂರ, ಪಿ.ಎಸ್.ನಂದೇಶ, ಸಿ.ಎಸ್.ಕಲ್ಯಾಣಿ, ಬಿ.ಎಂ.ಹಳೇಮನಿ, ಜಗದೀಶ ಮೇತ್ರಿ, ಸಂತೋಷ ಬಡ್ಡಿ, ಜಗದೀಶ ಗಾಣಿಗೇರ, ಪ್ರಶಾಂತ ಹೊಸಮನಿ, ಬಿ.ಡಿ.ನ್ಯಾಮಗೌಡ, ಮಲ್ಲಿಕಾರ್ಜುನ ಗಡ್ಡೆನ್ನವರ ಸೇರಿದಂತೆ ಶಿಕ್ಷಕ-ಶಿಕ್ಷಕಿಯರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 