ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅನನ್ಯ- ಜಾರಕಿಹೊಳಿ
Teachers play a unique role in shaping a bright future for children – Jarkiholi
ಲೋಕದರ್ಶನ ವರದಿ
ಗೋಕಾಕ 05: ಶೈಕ್ಷಣಿಕ ಕ್ಷೇತ್ರದಲ್ಲಿ ಶಿಕ್ಷಕರರು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಹೇಳಿದರು. ಅವರು ಶನಿವಾರದಂದು ನಗರದ ಮಹಾಲಕ್ಷ್ಮೀ ಸಭಾಭವನದಲ್ಲಿ ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದವರು ಹಮ್ಮಿಕೊಂಡ ಡಾ: ಸರ್ವಪಲ್ಲಿ ರಾಧಾಕೃಷ್ಣನ್ ಅವರ 139ನೇ ಹುಟ್ಟುಹಬ್ಬದ ನೆನಪಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗೋಕಾಕ ಶೈಕ್ಷಣಿಕವಾಗಿ ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಕೀರ್ತಿ ಶಿಕ್ಷಕರಿಗೆ ಸಲ್ಲುತ್ತದೆ. ಈ ಭಾಗದ ಸವಿ ಸತೀಶ ಜಾರಕಿಹೊಳಿ ಹಾಗೂ ಶಾಸಕರಾದ ರಮೇಶ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಶೈಕ್ಷಣಿಕ ಬೆಳವಣಿಗೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಕೆಲಸವನ್ನು ಶಿಕ್ಷಕರು ಮಾಡುತ್ತಿದ್ದಾರೆ.
ಗೋಕಾಕ ಶೈಕ್ಷಣಿಕ ಕ್ಷೇತ್ರದಲ್ಲಿ ಶಿಕ್ಷಕರರು ವಿದ್ಯಾರ್ಥಿಗಳ ಉನ್ನತ ಭವಿಷ್ಯಕ್ಕಾಗಿ ಹಗಲಿರುಳು ಶ್ರಮಿಸಿದ ಮಹಾನ್ ಶಿಲ್ಪಿಗಳು ಎಂದು ಬಣ್ಣಿಸಿದರಲ್ಲರದೇ ಕಳೆದ ಹತ್ತಾರು ವರ್ಷಗಳಲ್ಲಿ ನಮ್ಮ ಭಾಗದ ಮಕ್ಕಳು ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡುವುದರೊಂದಿಗೆ ಒಳ್ಳೆಯ ಪ್ರಜೆಗಳಾಗಿ ಬೆಳೆಯುತ್ತಿರುವುದು ಸಂತೋಷದ ಸಂಗತಿ. ಗ್ರಾಮೀಣ ಬಡ ಕೂಲಿ ಕಾರ್ಮಿಕರ ಹಾಗೂ ಹಿಂದುಳಿದ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸ ಚೈತನ್ಯ ತುಂಬಿ ಪ್ರಗತಿ ಪಥದಲ್ಲಿ ಹಾಗೂ ಮಕ್ಕಳು ಸುಸಂಸ್ಕೃತ, ಸತ್ಪ್ರಜೆಗಳಾಗಬೇಕು ಎಂದು ಹೇಳಿದರು.
ವೇದಿಕೆ ಮೇಲೆ ತಹಶೀಲ್ದಾರ್ ಡಾ ಮೋಹನ್ ಭಸ್ಮೆ, ತಾ.ಪಂ. ಇಓ ಪರುಶರಾಮ ಘಸ್ತಿ, ಬಿಇಓ ಜಿ.ಬಿ.ಬಳಗಾರ, ಸಮಾಜ ಕಲ್ಯಾಣ ಅಧಿಕಾರಿ ಎ.ಬಿ.ಮಲಬನ್ನವರ, ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕಿ ಭಾರತಿ ಮಹಾಲಹವಾಲ್ದಾರ, ಎಸ್.ವಿ.ಕುಲಕರ್ಣಿ, ಜಿ.ಆರ್.ಸನದಿ, ಜಿ.ಬಿ.ನಂದೇಪ್ಪನವರ, ಎನ್.ಬಿ.ಹಿರೇಮಠ, ಎಂ.ಬಿ.ಪಾಟೀಲ, ವಿನಾಯಕ ಮಾಳಿ,ಎಂ.ಎಸ್. ದೊಡ್ಡನ್ನವರ, ಎಸ್.ಎಸ್.ಮಾಳಗಿ, ಬಸವರಾಜ ಕಲ್ಲೋಳ್ಳಿ, ಎಚ್.ಎನ್.ಮೆಳವಂಕಿ, ಸಂಜು ನಾಯಿಕ ಸೇರಿದಂತೆ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ, ಸದಸ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದವರು, ಎಸ್.ಎಸ್.ಎಲ್‌ಸಿ ಶೇ.ನೂರು ಫಲಿತಾಂಶ ಪಡೆದ ಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಣ ಕ್ಷೇತ್ರದ ಸೇವೆಯನ್ನು ಗುರುತಿಸಿ ಇತ್ತೀಚಿಗೆ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಬಿಇಓ ಜಿ.ಬಿ.ಬಳಗಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ಶಿಕ್ಷಕ ಆರ್.ಎಲ್.ಮಿರ್ಜಿ ನಿರೂಪಿ, ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 