ಶಿಕ್ಷಕರು ಸಮಾಜ ಮುಖಿಯಾಗಿ ಕಾರ್ಯನಿರ್ವಹಿಸಬೇಕು: ಮಾಧವ ಗುಡಿ
Teachers should act as social leaders: Madhav Gudi
ವಿಜಯಪುರ 03: ದೇಶದ ಪ್ರಗತಿಯು ಗ್ರಾಮಗಳ ಪ್ರಗತಿಯನ್ನು ಅವಲಂಬಿಸಿದೆ. ಗ್ರಾಮಗಳ ಪ್ರಗತಿಯು ಶಿಕ್ಷಕರ ಸೇವೆಯನ್ನು ಅವಲಂಬಿಸಿದೆ ಎಂದು ಹತ್ತರಿಕಿಹಾಳ ಪ್ರೌಢ ಶಾಲೆ ಶಿಕ್ಷಕ ಮಾಧವ ಗುಡಿ ಹೇಳಿದರು.
ನಿಡಗುಂದಿ ತಾಲೂಕು ಯಲಗೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗವು ಹಮ್ಮಿಕೊಂಡಿದ್ದ ಮೂರು ದಿನಗಳ ನಾಗರಿಕ ಪೌರತ್ವ ತರಬೇತಿ ಶಿಬಿರದಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಗಳ ಕುರಿತು ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.
ಶಿಕ್ಷಕರು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು. ಶಿಕ್ಷಕ ತರಬೇತಿಯಲ್ಲಿ ಇರುವಾಗಲೇ ಸಮುದಾಯದ ಕುರಿತು ಧನಾತ್ಮಕ ಮನೋಭಾವನೆ ಹೊಂದಿರುವುದು ಬಹುಮುಖ್ಯವೆಂದು ಪ್ರತಿಪಾದಿಸಿದರು. ಈ ಶಿಬಿರಗಳು, ಶಿಕ್ಷಕ ವೃತ್ತಿ ನಿರ್ವಹಿಸುವವರಿಗೆ ನೇರ ಅನುಭವವನ್ನು ನೀಡಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ವಿಷ್ಣು ಶಿಂದೆ ಮಾತನಾಡಿ, ಶಿಕ್ಷಕ ತರಬೇತಿಯು ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿದ್ದು, ಶಿಕ್ಷಕರ ವೃತ್ತಿಗೆ ಸಮಾಜದಲ್ಲಿ ಗೌರವದ ಸ್ಥಾನವಿದೆ. ತರಬೇತಿ ಶಿಬಿರಗಳಲ್ಲಿ ವಿದ್ಯಾರ್ಥಿ ಶಿಕ್ಷಕರಿಗೆ ನೇರ ಅನುಭವ ನೀಡುವ ಚಟುವಟಿಕೆಗಳನ್ನು ರೂಪಿಸುವುದು ಹಾಗೂ ಸಮುದಾಯದೊಡನೆ ಸಂವಾದ ನಡೆಸುವುದು ಅತ್ಯಂತ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ವಿಭಾಗವು ಗ್ರಾಮೀಣ ಭಾಗಗಳಲ್ಲಿ ತರಬೇತಿ ನೀಡುವ ಮೂಲಕ ಸಮರ್ಥ ಶಿಕ್ಷಕರನ್ನು ತಯಾರಿಸುತ್ತಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಶಿಬಿರ ಸಂಯೋಜಕ ಡಾ. ಉದಯಕುಮಾರ ಕುಲಕರ್ಣಿ, ಡಾ. ಅಶೋಕ್ ಕುಮಾರ್ ಸುರಪುರ, ಡಾ.ಪ್ರಕಾಶ್ ಸಣ್ಣಪ್ಪನವರ್, ಯಲಗೂರು ಗ್ರಾಮದ ವಿವಿಧ ಗಣ್ಯರು ಹಾಗೂ ಬಿ.ಎಡ್ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಬಿ.ಎಡ್ ವಿದ್ಯಾರ್ಥಿನಿಯರು ಮಹಿಳಾ ಗೀತೆ ಹಾಡಿದರು. ಪ್ರಶಿಕ್ಷಣಾರ್ಥಿ ಸುಜಾತಾ ನಿರೂಪಿಸಿದರು. ಮಹಾದೇವಿ ಸ್ವಾಗತಿಸಿದರು. ಕಜೋಲ್ ಮತ್ತು ಅಕ್ಷತಾ ಬಿರಾದಾರ್ ಅತಿಥಿಯರನ್ನು ಪರಿಚಯಿಸಿದರು. ದಾನಮ್ಮ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 