ಶಾಲಾ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಿದ ಶಿಕ್ಷಕರು
Teachers welcomed school students with flowers
ದೇವರಹಿಪ್ಪರಗಿ 29: ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯರಾದ ಆಯ್.ಎಸ್.ನರೂಣಿ ಅವರು ಎರಡು ತಿಂಗಳು ಬೇಸಿಗೆ ರಜೆಯಲ್ಲಿದ್ದ ವಿದ್ಯಾರ್ಥಿಗಳು ಮೇ 29 ರಂದು ಮತ್ತೆ ಶಾಲೆಗೆ ಮರಳಲಿದ್ದ ವಿದ್ಯಾರ್ಥಿಗಳಿಗೆ ಪುಷ್ಪ ಗುಚ್ಛ ನೀಡಿ ಆತ್ಮಿಯವಾಗಿ ಸ್ವಾಗತಿಸಿದ ಶಿಕ್ಷಕರು.ಹೊಸ ಶೈಕ್ಷಣಿಕ ವರ್ಷಕ್ಕೆ ಶಾಲೆಗೆ ವಿದ್ಯಾರ್ಥಿಗಳ ಸ್ವಾಗತಕ್ಕೆ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಮುಖ್ಯ ಗುರುಗಳು ಮತ್ತು ಶಾಲೆ ಶಿಕ್ಷಕರು ಅಗತ್ಯ ಸಿದ್ಧತೆ ಕೈಗೊಂಡಿದ್ದರು.
ವಿದ್ಯಾರ್ಥಿಗಳು ಮರಳುವ ಹಿನ್ನೆಲೆಯಲ್ಲಿ ಶಾಲಾ ಕಟ್ಟಡವನ್ನು ತಳಿರು ತೋರಣಗಳಿಂದ ಅಲಂಕರಿಸಿ ಸಿಂಗರಿಸಲಾಗಿತ್ತು. ಈ ದಿನ ಶಾಲೆಗೆ ಬರುವ ಮಕ್ಕಳಿಗೆ ಸಿಹಿ ತಿನಿಸು ಮಾಡಲಾಯಿತು. ಸಿಹಿ ಸೇವಿಸಿದ ವಿದ್ಯಾರ್ಥಿಗಳು ಸಂತೋಷದಿಂದ ಶಾಲೆಯಲ್ಲಿ ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಶಿಕ್ಷಕರಾದ ಅರ್ಜುನ ವಾಲಿಕಾರ,ಎ.ಎ. ಗಚ್ಚಿನಮಹಲ, ರಾಘವೇಂದ್ರ ಕುಲಕರ್ಣಿ, ಪ್ರೇಮಸಿಂಗ ಜಾದವ,ಜಿ.ಎಲ್.ರಾಠೋಡ, ಸುರೇಶ ಲಮಾಣಿ, ಮನೋಹರ ಬಡಿಗೇರ, ಶಬ್ಬೀರ್ ಅಹ್ಮದ್, ರೇಣುಕಾ ತಳಕೇರಿ, ರೇಣುಕಾ ಸುರಗಿಹಳ್ಳಿ, ಸರೂಬಾಯಿ ಗುನ್ನಾಪುರ, ಲಕ್ಷ್ಮಿ ಇಂಗಳಗಿ ಸೇರಿದಂತೆ ಗ್ರಾಮದ ಪ್ರಮುಖರು ಗಣ್ಯರು ಎಸ್ ಡಿ ಎಂ ಸಿ ಸದಸ್ಯರು ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 