ಬೆಂಗಳೂರು 09: ಇಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವು ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ.
ಭಾರತ ಕ್ರಿಕೆಟ್ ತಂಡವು 12 ವರ್ಷಗಳ ನಂತರ ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಳ್ಳುವ ಟೀಮ್ ಇಂಡಿಯಾ ಸಜ್ಜಾಗಿದೆ.
ಭಾರತ ತಂಡದ ಗೆಲುವಿಗಾಗಿ ಅಭಿಮಾನಿಗಳು ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇನ್ನೂ ಕೆಲವು ಅಭಿಮಾನಿಗಳು ವಿಶಿಷ್ಟವಾಗಿ ಟೀಂ ಇಂಡಿಯಾಗೆ ಶುಭ ಕೋರಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಮರಳು ಕಲಾಕೃತಿ ರಚಿಸಿ ಟೀಂ ಇಂಡಿಯಾಕ್ಕೆ ಶುಭ ಕೋರಿದ್ದಾರೆ.