ವಿದೇಶಾಂಗ ವ್ಯವಹಾರದಲ್ಲಿ ಇಂದು ತಾಂತ್ರಿಕ ವಿಧಾನಗಳಿಗೆ ಹೆಚ್ಚು ಮಹತ್ವ: ಪ್ರೊ. ಪಟಗುಂದಿ
Technical methods are more important in foreign affairs today: Prof. Patagundi
ಬೆಳಗಾವಿ 02: ಅಂತರಾಷ್ಟ್ರೀಯ ಸಂಬಂಧಗಳು ಮತ್ತು ವಿದೇಶಾಂಗ ವ್ಯವಹಾರದಲ್ಲಿ ಇಂದು ಸಾಂಪ್ರದಾಯಿಕ ವಿಧಾನಗಳಿಗಿಂತ ತಾಂತ್ರಿಕ ವಿಧಾನಗಳಿಗೆ ಹೆಚ್ಚು ಒತ್ತು ಮತ್ತು ಮಹತ್ವ ಬಂದಿದೆ. ಜೊತೆಗೆ ಎಲ್ಲಾ ಕ್ಷೇತ್ರಗಳಲ್ಲಿ ತಂತ್ರಜ್ಞಾನ ತನ್ನ ಪ್ರಭಾವವನ್ನು ಬೀರಿದ್ದು ಅದನ್ನು ಸರಿಯಾಗಿ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಬೋಧಿಸಿ ಸಮರ್ಥ ಪ್ರಜೆಗಳನ್ನಾಗಿ ನಿರ್ಮಿಸುವ ಜವಾಬ್ದಾರಿ ಉಪನ್ಯಾಸಕರ ಮೇಲಿದೆ. ತಂತ್ರಜ್ಞಾನವು ಯುದ್ಧ, ಪರಸ್ಪರ ಸಂಬಂಧಗಳು ಮತ್ತು ಅಭಿವೃದ್ಧಿಗೆ ರಾಷ್ಟ್ರದ ಅಭಿವೃದ್ಧಿಗೆ ಪೂರಕ ವಾತಾವರಣವನ್ನು ನಿರ್ಮಿಸಿ ಅವುಗಳ ಏಳಿಗೆಗೆ ಸಹಕರಿಸುತ್ತಿದೆ ಇಂದು ಪ್ರತಿಯೊಂದು ರಾಷ್ಟ್ರ ತಂತ್ರಜ್ಞಾನದ ವಿಷಯದಲ್ಲಿ ಪರಾವಲಂಬಿಯಾಗಿದೆ. ಆದ್ದರಿಂದ ನಾವೆಲ್ಲರೂ ಅದಕ್ಕೆ ಹೊಂದಿಕೊಂಡು ಸಾಮಾಜಿಕ ಸಮತೋಲನ ಕಾಪಾಡಿಕೊಂಡು ಮೌಲ್ಯಗಳನ್ನು ಉಳಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡಬೇಕಾಗಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಸಚಿವ ಪ್ರೊ. ಎಸ್ ಎಸ್ ಪಟಗುಂದಿ ಅವರು ಅಭಿಪ್ರಾಯಪಟ್ಟರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕಾಲೇಜು ರಾಜ್ಯಶಾಸ್ತ್ರ ಅಧ್ಯಾಪಕರ ಸಂಘದ ವತಿಯಿಂದ ನಗರದ ಭರತೇಶ ಪದವಿ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ರಾಜಕೀಯದಲ್ಲಿ ತಂತ್ರಜ್ಞಾನದ ಉಪಯೋಗ ವಿಷಯದ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಗಾರಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.
ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಸಿ.ಎಂ. ತ್ಯಾಗರಾಜ್ ಅವರು ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಮಾನವಿಕ ವಿಷಯಗಳು ಹೊಸ ಸವಾಲುಗಳನ್ನು ಎದುರಿಸಿ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಅಗತ್ಯತೆ ಇದೆ. ಸರ್ಕಾರವು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಯನ್ನು ತರುತ್ತಿದ್ದು. ಇಂದಿನ ಸಮಕಾಲಿನ ಅಗತ್ಯಗಳಿಗೆ ತಕ್ಕಂತೆ ಪಠ್ಯಕ್ರಮದಲ್ಲಿ, ಬೋಧನೆಯಲ್ಲಿ, ಮೌಲ್ಯಮಾಪನದಲ್ಲಿ ಹಲವು ನವೀಕರಣಗಳ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಸಮಯ ನಿರ್ವಹಣೆ, ವಿಮರ್ಶಾತ್ಮಕ ಚಿಂತನೆ, ಸಂವಹನ, ತಂಡದ ಕೆಲಸ, ಹೊಂದಿಕೊಳ್ಳುವಿಕೆ ಮತ್ತು ಸಮಸ್ಯೆ ಪರಿಹಾರ ಮುಂತಾದ ಕೌಶಲ್ಯಗಳನ್ನು ಬೆಳೆಸಲು ವರ್ಕ್ ಬುಕ್ ಅನ್ನು ಪ್ರಸ್ತುತಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಆಧುನಿಕ ವಿನೂತನ ಬೋಧನಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಗಾರದಲ್ಲಿ ರಾಜ್ಯಶಾಸ್ತ್ರ ವಿಷಯದ ನಿವೃತ್ತಿ ಹೊಂದಿದ ಪ್ರಾಧ್ಯಾಪಕರುಗಳಾದ ಡಾ. ವಿ.ಬಿ. ಪಾಟೀಲ ಹಾಗೂ ಪ್ರೊ. ಬಿ.ಜಿ. ಪಾಟೀಲ ಅವರನ್ನು ಅಲ್ಲದೆ, ಪಿಎಚ್.ಡಿ. ನೆಟ್ ಹಾಗೂ ಸೆಟ್ ಪಾಸಾದ ರಾಜ್ಯಶಾಸ್ತ್ರ ಉಪನ್ಯಾಸಕರುಗಳಿಗೆ ಸನ್ಮಾನಿಸಲಾಯಿತು
ಸಂಘದ ಅಧ್ಯಕ್ಷ ಡಾ. ವಿ. ಬಿ. ಪಾಟೀಲ ಸ್ವಾಗತಿಸಿ, ಖಜಾಂಚಿ ಡಾ. ಎಸ್. ಪಿ. ತಳವಾರ ವಂದಿಸಿದರು. ಬಿ.ಓ.ಇ. ಚೇರ್ಮನ್ನ ಡಾ. ಬಿ ಜಿ ಪಾಟೀಲ ಪ್ರಾಸ್ತಾವಿಕ ನುಡಿಗಳನ್ನೂ ಆಡಿದರು. ಪೂರ್ಣಿಮಾ ಕಾಟೆ ಪ್ರಾರ್ಥಿಸಿದರು. ಡಾ. ಮಲ್ಲೇಶ ದೊಡ್ಡಲಕ್ಕಣ್ಣವರ ನಿರೂಪಿಸಿದರು. ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳ ರಾಜ್ಯಶಾಸ್ತ್ರ ಪ್ರಾಧ್ಯಾಪಕರುಗಳು ಹಾಜರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 