ಪಾರದರ್ಶಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತಂತ್ರಜ್ಞಾನದ ಲೇಪನ

ಪಾರದರ್ಶಕ  ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತಂತ್ರಜ್ಞಾನದ ಲೇಪನ Technology overlay for transparent SSLC exam

ಲೋಕದರ್ಶನ ವರದಿ 

        ವಿಜಯಪುರ ಮಾರ್ಚ್‌31 : ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಹಿ1ರ ಹಿನ್ನೆಲೆಯಲ್ಲಿ ಪಾರದರ್ಶಕ, ನಿಷ್ಪಕ್ಷಪಾತ ಪರೀಕ್ಷೆ ನಡೆಸುವ ಉದ್ದೇಶದಿಂದ ಕೈಗೊಳ್ಳಲಾದ ಕ್ರಮಗಳನ್ನು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು. 

ವೆಬ್ ಕಾಸ್ಟಿಂಗ್ ವ್ಯವಸ್ಥೆಯ ಮೂಲಕ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಚಟುವಟಿಕೆಗಳ ನೇರ​‍್ರಸಾರ ವೀಕ್ಷಿಸಿದರು. ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳ ಸಮರ​‍್ಕ ಕಾರ್ಯನಿರ್ವಹಣೆ, ಇಂಟರ್ನೆಟ್ ಸಂಪರ್ಕದ ಸ್ಥಿರತೆ, ದೃಶ್ಯಗಳ ಸ್ಪಷ್ಟತೆ ಹಾಗೂ ನಿಯಂತ್ರಣ ಕೊಠಡಿಯ ಕಾರ್ಯವಿಧಾನಗಳನ್ನು ಪರೀಶೀಲಿಸಿದರು.  

ಬಳಿಕ ಮಾತನಾಡಿದ ಅವರು, ಪರೀಕ್ಷಾ ಪ್ರಕ್ರಿಯೆಯಲ್ಲಿ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ನಿಗಾ ಅತ್ಯಗತ್ಯ ಎಂದರು. ವೆಬ್ ಕಾಸ್ಟಿಂಗ್ ವ್ಯವಸ್ಥೆಯು ವಿದ್ಯಾರ್ಥಿಗಳಿಗೆ ನ್ಯಾಯಯುತ ವಾತಾವರಣವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಆದ್ದರಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ತಾಂತ್ರಿಕ ದೋಷಗಳು ಎದುರಾಗದಂತೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣ ಸ್ಪಂದಿಸಲು ಸಿದ್ಧವಾಗಿರಬೇಕು. ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದ ಕೂಡಲೇ ತಕ್ಷಣ ಸರಿಪಡಿಸಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳು,ಶಿಕ್ಷಕರು ಮತ್ತು ಸಿಬ್ಬಂದಿಗಳು ಜಾಗರೂಕತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು. 

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಶಾಂತ, ಸುರಕ್ಷಿತ ಹಾಗೂ ಶಿಸ್ತಿನ ವಾತಾವರಣ ನಿರ್ಮಾಣವಾಗಿರುವುದನ್ನು ವೀಕ್ಷಿಸಿ, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ವ್ಯವಸ್ಥೆಯನ್ನು ಮುಂದುವರಿಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದರು. 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ಎಸ್‌ಎಸ್‌ಎಲ್‌ಸಿ ಜಿಲ್ಲಾ ನೋಡಲ್ ಅಧಿಕಾರಿಗಳಾದ ಟಿ.ಎಸ್‌.ಕೊಲ್ಹಾರ, ಜಿಲ್ಲೆಯ ಎಲ್ಲಾ ವಲಯಗಳ ಮುಖ್ಯಸ್ಥರು ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ವೀಕ್ಷಕರು, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿಯವರು ಉಪಸ್ಥಿತರಿದ್ದರು.