ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರಿಗಾಗಿ ‘ಟೆಲಿವಿಷನ್ ಆ್ಯಂಕರಿಂಗ್’ ಕಾರ್ಯಾಗಾರ
ವಿಜಯಪುರ 19: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮಹಿಳಾ ವಿವಿಯ ಯುಜಿ ವಿದ್ಯಾರ್ಥಿನಿಯರಿಗಾಗಿ ‘ಟೆಲಿವಿಷನ್ ಆ್ಯಂಕರಿಂಗ್’ ಕುರಿತ ಒಂದು ದಿನದ ಕಾರ್ಯಾಗಾರವನ್ನು ಇದೇ ದಿ.20 ರಂದು ಬೆಳಿಗ್ಗೆ 10:00 ಗಂಟೆಗೆ ವಿಭಾಗದ ಟಿವಿ ಸ್ಟುಡಿಯೋದಲ್ಲಿ ಆಯೋಜಿಸಲಾಗಿದೆ.
ಕಾರ್ಯಾಗಾರವನ್ನು ಮಹಿಳಾ ವಿವಿಯ ಯುಜಿ ವಿಭಾಗದ ವಿಶೇಷ ಅಧಿಕಾರಿ ಪ್ರೊ.ಸಕ್ಪಾಲ್ ಹೂವಣ್ಣ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ವಹಿಸಲಿದ್ದಾರೆ.
ಕಾರ್ಯಾಗಾರದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ ಭಾಗವಹಿಸಲಿದ್ದು, ಬೋಧಕ ಬೋದಕೇತರ ಸಿಬ್ಬಂದಿವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ ಎಂದು ಮಹಿಳಾ ವಿವಿಯ ಪತ್ರಿಕಾ ಪ್ರಕಟಣೆಯಲ್ಲಿ