ದೇವಾಲಯದ ಕಾಂಪೌಂಡ್ ನಿರ್ಮಾಣ:ರಮೇಶ ಜಿಗಜಿಣಗಿ
Temple Compound Construction: Ramesh Jigajinagi
ಇಂಡಿ 18: ತಾಲ್ಲೂಕಿನ ಸುಕ್ಷೇತ್ರ ತಡವಲಗಾ (ಜೋಡಗುಡಿ) ಗ್ರಾಮದ ಮರುಳಸಿದ್ದೇಶ್ವರ ದೇವಾಲಯ ಕಾಂಪೌಂಡ್ ನಿರ್ಮಾಣ ಮಾಡಿಕೊಡುವುದಾಗಿ ಮಾಜಿ ಕೇಂದ್ರ ಸಚಿವರು ಹಾಗೂ ಹಾಲಿ ವಿಜಯಪೂರ ಲೋಕಸಭಾ ಸದಸ್ಯರಾದ ರಮೇಶ ಜಿಗಜಿಣಗಿ ಅವರು ವಾಗ್ದಾನ ಮಾಡಿದರು. ಅವರು ನಿನ್ನೆ ನಡೆದ ಜೋಡಗುಡಿ ಮರುಳಸಿದ್ದೇಶ್ವರ ಜಾತ್ರೆಯ ನಿಮಿತ್ತವಾಗಿ ಹಮ್ಮಿಕೊಂಡಿದ್ದ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ನಾನು ನನ್ನ ಅನುದಾನಲ್ಲಿ ಆಗಲಿ ಅಥವಾ ಬೇರೆ ಯಾವುದೇ ರೀತಿಯಲ್ಲಿ ಆದರೂ ಕೂಡಾ ನಾನು ಜೋಡಗುಡಿ ಮರುಳಸಿದ್ದೇಶ್ವರ ದೇವಾಲಯದ ಕಾಂಪೌಂಡ್ ನಿರ್ಮಾಣ ಮಾಡಿಕೊಡುವುದಾಗಿ ಕಾಶಿ ಜಗದ್ಗುರುಗಳ ಸಮ್ಮುಖದಲ್ಲಿ ಘೋಷಣೆ ಮಾಡುತ್ತಿದ್ದಂತೆ ನೇರದ ಭಕ್ತಸಮೂಹ ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದ್ದರು.
ಈ ಮುಂಚೆ ಕೂಡಾ ನಾನು ಅನುದಾನ ಹಣ ನೀಡಿದ್ದೆನೆ. ರಾಷ್ಟೀಯ ಹೆದ್ದಾರಿ ಪಕ್ಕದಲ್ಲಿ ಇರುವ ಈ ದೇವಾಲಯ ಮುಂದಿನ ದಿನಗಳಲ್ಲಿ ದೊಡ್ಡ ಪ್ರೇಕ್ಷಣಿಯ ತಾಣವಾಗಿ ಬೆಳೆಯಲಿ ಎಂದು ಹೇಳಿದರು. ಈ ಕಾರ್ಯಕ್ರಮ ದಿವ್ಯ ಸಾನಿಧ್ಯವನ್ನು ಕಾಶಿ ಜಗದ್ಗುರುಗಳ ವಹಿಸಿದ್ದರು. ಈ ಸಂದರ್ಭದಲ್ಲಿ ತಡವಲಗಾ ಅಭಿನವ ರಾಚೋಟೇಶ್ವರ ಶಿವಾಚಾರ್ಯರು ಆಲಮೇಲದ ಚಂದ್ರಶೇಖರ ಶಿವಾಚಾರ್ಯರು ಜಿಗಜಿಣಗಿಯ ಮುಪ್ಪಿನಾರ್ಯ ಶಿವಾಚಾರ್ಯರು ಮಮದಾಪೂರ ಶ್ರೀಗಳು, ಶಿವಾನಂದಯ್ಯ ಶಾಸ್ತ್ರಿಗಳು, ನಿಕಟಪೂರ್ವ ದೆಹಲಿ ಪ್ರತಿನಿಧಿ ಶಂಕರಗೌಡ ಪಾಟೀಲ ಮಂಜುನಾಥ ವಂದಾಲ ನಾಗುಗೌಡ ಪಾಟೀಲ ಚಂದ್ರಶೇಖರ ಹೂಗಾರ ಬಾಬುಸಾಹುಕಾರ ಮೇತ್ರಿ ಬಸವರಾಜ ಇಂಡಿ ಚಂದ್ರಶೇಖರ ರೂಗಿ ತಮ್ಮಣ್ಣ ಪೂಜಾರಿ ಅಣ್ಣಾರಾಯ ಮದರಿ ಮಳಸಿದ್ದಪ್ಪ ಖಸ್ಕಿ ಅಪ್ಪು ಇಂಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 