ದೇವಾಲಯಗಳು ಸಂಸ್ಕಾರ, ಸಂಸ್ಕೃತಿ, ಮಾನವೀಯತೆ ಬೆಳೆಸುವ ಕೇಂದ್ರಗಳಾಗಬೇಕು: ಮುರುಘೇಂದ್ರ ಸ್ವಾಮೀಜಿ
Temples should become centers for fostering values, culture, and humanity: Murughendra Swamiji
ಲೋಕದರ್ಶನ ವರದಿ
ಯರಗಟ್ಟಿ 18: ದೇವಾಲಯಗಳು ಸಮಾಜದಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ ಹಾಗೂ ಮಾನವೀಯತೆಯನ್ನು ಬೆಳೆಸುವ ಕೇಂದ್ರಗಳಾಗಬೇಕು ಎಂದು ಮುನವಳ್ಳಿ ಸೋಮಶೇಖರ ಮಠದ ಮುರುಘೇಂದ್ರ ಸ್ವಾಮೀಜಿ ಹೇಳಿದರು.
ಸಮೀಪದ ಆಲದಕಟ್ಟಿ ಕೆ.ಎಂ. ಗ್ರಾಮದ ನೂತನವಾಗಿ ನಿರ್ಮಾಣಗೊಂಡ ಶ್ರೀ ರಿಂಪಗಲ್ಲ ಬಸವೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ದೇವಾಲಯಗಳು ಕೇವಲ ಪೂಜೆ ಹಾಗೂ ಧಾರ್ಮಿಕ ಆಚರಣೆಗಳಿಗೆ ಸೀಮಿತವಾಗದೆ ಭಕ್ತರ ಬದುಕಿಗೆ ನೆಮ್ಮದಿ ನೀಡುವ ತಾಣಗಳಾಗಬೇಕು ಎಂದರು.
ಶ್ರುತಿ ವಿಶ್ವಾಸ ವೈದ್ಯ ಮಾತನಾಡಿ, ಶ್ರಾವಣ ಮಾಸದಲ್ಲಿ ರೈತರು ತಮ್ಮ ಬಿಡುವಿನ ವೇಳೆಯಲ್ಲಿ ಶರಣರು ಸಾರಿದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ಹೇಳಿದರು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವಿರೂಪಾಕ್ಷ ಮಾಮನಿ ಮಾತನಾಡಿ, ಸನಾತನ ಧರ್ಮದಲ್ಲಿ ದೇವಾಲಯಗಳಿಗೆ ತನ್ನದೇ ಆದ ವೈಶಿಷ್ಟ್ಯವಿದೆ. ಗ್ರಾಮೀಣ ಭಾಗದಲ್ಲಿ ಸಾಕಷ್ಟು ದೇವಾಲಯಗಳು ನಿರ್ಮಾಣವಾಗುತ್ತಿವೆ. ಎಲ್ಲರೂ ಭಗವಂತನ ಧ್ಯಾನ ಮಾಡಿದರೆ ಆತ ನಮ್ಮನ್ನು ಕಾಪಾಡುತ್ತಾನೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಾಸ್ತು ಹೋಮ, ಗಣಹೋಮ ಹಾಗೂ ನವಗ್ರಹ ಶಾಂತಿ ನೆರವೇರಿಸಲಾಯಿತು. ಬಳಿಕ ಮಹಾಪ್ರಸಾದ ವಿತರಿಸಲಾಯಿತು. ನಂತರ ಗ್ರಾಮಸ್ಥರು ಮುರುಘೇಂದ್ರ ಸ್ವಾಮೀಜಿ, ಶ್ರುತಿ ವಿಶ್ವಾಸ ವೈದ್ಯ ಹಾಗೂ ವಿರೂಪಾಕ್ಷ ಮಾಮನಿ ಅವರನ್ನು ಸನ್ಮಾನಿಸಿದರು.
ಚಂದ್ರಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಪಿಕೆಪಿಎಸ್ ಮಾಜಿ ಅಧ್ಯಕ್ಷ ಅನೀಲಕುಮಾರ ದೇಸಾಯಿ, ಕೆಎಂಎಫ್ ಮಾಜಿ ಅಧ್ಯಕ್ಷ ಎಸ್.ಎಸ್. ಮುಗಲಿ, ಮುಖಂಡ ಮಹಾಂತೇಶಗೌಡರ, ವೀರಣ್ಣ ಹುಡ್ಡಾರ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಅಶೋಕ ಚಿಕ್ಕೊಪ್ಪ, ಪಕ್ಕೀರ್ಪ ಸಣ್ಣಗೌಡರ, ಈರಯ್ಯ ಮಠಪತಿ, ಚನ್ನಬಸಯ್ಯ ಹಿರೇಮಠ, ರುದ್ರಯ್ಯ ಹಿರೇಮಠ, ವಿಶಾಲ ಹಿರೇಮಠ, ಬಸಲಿಂಗಯ್ಯ ಹಿರೇಮಠ, ಪ್ರಭು ಮಠಪತಿ, ಮಲ್ಲಪ್ಪ ಹೊಳಿ, ಸಂಗ್ರಾಮ ಗೌಡರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 