ದೇವಸ್ಥಾನಗಳು ಆಚಾರ ಕೇಂದ್ರಗಳಾಗಿ ರೂಪುಗೊಳ್ಳಲಿ: ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ
Temples should become centers of worship: Chenna Mallikarjuna Swamiji
ಬ್ಯಾಡಗಿ 06 : ಸಂಸ್ಕೃತಿ, ಸಂಸ್ಕಾರ, ಶಿಷ್ಟಾಚಾರ, ಶಿಸ್ತು, ಸಂಯಮ, ಮಾತೃಭಾವನೆ ಕಲಿಸುವ ದೇವಸ್ಥಾನಗಳು ನಾಡಿನ ಆಚಾರ ಕೇಂದ್ರಗಳಾಗಿ ಪ್ರತಿಯೊಂದು ಪಟ್ಟಣಗಳು ಇರಬೇಕು. ಪೂರ್ವಿಕರು ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ಸಾಗಬೇಕು ಎಂದು ಮುಪ್ಪಿನೀಶ್ವರ ಮಠದ ಚೆನ್ನ ಮಲ್ಲಿಕಾರ್ಜುನ ಸ್ವಾಮೀಜಿ ಕರೆ ನೀಡಿದರು.
ಪಟ್ಟಣದ ನಾಯಕರ (ತಳವಾರ) ಓಣಿಯಲ್ಲಿ ನೂತನವಾಗಿ ಕಟ್ಟಿರುವ ನೂತನ ವಿಗ್ರಹದ ಮೂರ್ತಿ ಪ್ರತಿಷ್ಠಾಪನ ಕಾರ್ಯಕ್ರಮ ಮತ್ತು ಬ್ರಹ್ಮಲಿಂಗೇಶ್ವರ ದೇವಸ್ಥಾನ ಉದ್ಘಾಟನೆಯ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.‘ಆಚಾರಕ್ಕೆ ದೇವಾಲಯ, ವಿಚಾರಕ್ಕೆ ಶಾಲೆ, ಜೀವ ಜಲಕ್ಕೆ ಕೆರೆ ಕಟ್ಟೆಗಳು ಇದ್ದರೆ ಗ್ರಾಮೀಣ ಭಾಗವು ಸಮೃದ್ಧಿಯಾಗಿ ಸಮಾತೋಲನ ಕೂಡಿರುತ್ತದೆ. ನಮ್ಮ ಹಿರಿಯರ ಸಂಪ್ರದಾಯವನ್ನು ಪಾಲಿಸಬೇಕು. ನಮ್ಮಿಂದ ಸಾಧ್ಯವಾದಷ್ಟು ಮತ್ತೊಬ್ಬರಿಗೆ ದಾನ ನೀಡುವುದರಿಂದ ಘನತೆಯ ಜೊತೆಗೆ ಜೀವನದಲ್ಲಿ ಯಶಸ್ಸು ಸಿಕ್ಕಿ ಮೋಕ್ಷ ಸಿಗಲಿದೆ. ಊರಿಗೆ ಉಪಕಾರಿಯಾಗಿ ಜೀವನದಲ್ಲಿ ಸಾರ್ಥಕತೆ ಕಾಣಬೇಕು’ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾಜಿ ಪುರಸಭೆ ಅಧ್ಯಕ್ಷ ಬಸಣ್ಣ ಛತ್ರದ ಮಾತನಾಡಿ‘ಧರ್ಮದ ಹೆಸರಿನಲ್ಲಿ ದಾಳಿಗಳು ಹಿಂದಿನಿಂದಲೂ ನಡೆದು ಬರುತ್ತಿದ್ದು, ಇಂದಿಗೂ ನಡೆಯುತ್ತಿದೆ. ಭಾರತೀಯರಾದ ನಾವು ದೇವರು, ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡು ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗಬೇಕು’ ಎಂದರು.
ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಮಾಲತೇಶ ದೇವಗಿರಿ.ಸ್ವಾಗತವನ್ನು ಜಿತೇಂದ್ರ ಸುಣಗಾರ.ಪ್ರಾಸ್ತಾವಿಕ ನುಡಿಯನ್ನು ಬಸವರಾಜ ಭಿಮಾನಾಯ್ಕ.ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪುರಸಭೆ ಅಧ್ಯಕ್ಷ ಬಾಲಚಂದ್ರ ಗೌಡ ಪಾಟೀಲ್ ಶಿವಯೋಗಿ ಶಿರೂರ. ಜಿ ಸಿ ಹಿರೇಮಠ ರಂಗಣ್ಣ ಎಲ್ಲಿ ಸರೋಜಮ್ಮ ಉಳ್ಳಾಗಡ್ಡಿ, ಮಲ್ಲಮ್ಮ ಪಾಟೀಲ್ ಗಾಯತ್ರಿ ರಾಯ್ಕರ್. ಹನುಮಂತಪ್ಪ ಮ್ಯಾಗೇರಿ ಜಯಪ್ಪ ಕರಿ ಸಂಗಮ್ಮನವರ್. ಬಿಟಿ ಚತ್ರದ. ಹಾಗೂ ಸಮಾಜದ ಅನೇಕ ಮುಖಂಡರು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 