ಬಳ್ಳಾರಿ,ಮಾ.27: ಬಳ್ಳಾರಿ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ನೋವೆಲ್ ಕರೋನಾ ಆಸ್ಪತ್ರೆಯನ್ನಾಗಿ ಕಾರ್ಯನಿರ್ವಹಿಸಬೇಕಾಗಿರುವುದರಿಂದ ತಾತ್ಕಾಲಿಕವಾಗಿ ಒಳ ಹಾಗೂ ಹೊರ ರೋಗಿಗಳ ಚಿಕಿತ್ಸೆ ನೀಡುವುದನ್ನು ಮಾ.30ರರಿಂದ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಸ್ಪಷ್ಟಪಡಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಸಭೆ ಹಾಗೂ ಸರಕಾರದ ಮುಖ್ಯ ಕಾರ್ಯದಶರ್ಿಗಳು ನಡೆಸಿದ ವಿಡಿಯೋ ಕಾನ್ಪರೆನ್ಸ್ನಲ್ಲಿನ ಸೂಚಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ನೋವೆಲ್ ಕರೋನಾ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸಬೇಕಾಗಿದ್ದು, ಕೇವಲ ನೋವೆಲ್ ಕರೋನಾ ರೋಗ ಬಾಧಿತರಿಗೆ ಮಾತ್ರ ಚಿಕಿತ್ಸೆ ನೀಡಬೇಕಾಗಿರುವುದರಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
*ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ವೇಳಾಪಟ್ಟಿ ನಿಗದಿ: ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಸಲು ವೇಳಾಪಟ್ಟಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಕುಲ್ ಅವರು ತಿಳಿಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಿಸುವುದರ ಜೊತೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಸಾರ್ವಜನಿಕರಿಗೆ ಅಗತ್ಯ ವಸ್ತುಗಳಾದ ತರಕಾರಿ,ಹಣ್ಣು,ಹಾಲು,ದಿನಸಿ ವಸ್ತುಗಳು, ಮಾಂಸ,ಮೀನು ಇನ್ನೀತರ ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 7ರಿಂದ 11ರವರೆಗೆ ಹಾಗೂ ಸಂಜೆ 5ರಿಂದ 7ರವರೆಗೆ ಸಮಯ ನಿಗದಿಪಡಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಸರಕಾರಿ ವಾಹನಗಳು, ಅಗತ್ಯ ಸೇವೆಗೆ ಸಂಬಂಣಧಿಸಿದ ಅಧಿಕಾರಿ/ಸಿಬ್ಬಂದಿಯ ವಾಹನಗಳು (ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ನೀಡಲಾದ ಗುರುತಿನ ಚೀಟಿಯೊಂದಿಗೆ ತೆರಳಲು ಸೂಚಿಸಿದೆ), ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರರು ನೀಡಲಾದ ಪಾಸ್ ಹೊಂದಿರುವ ವಾಹನಗಳು,ಅಗತ್ಯ ವಸ್ತುಗಳು ಸರಬರಾಜು ಮಾಡುವ ಗೂಡ್ಸ್ ವಾಹನಗಳು(ಖಾಲಿ ಅಥವಾ ಸಾಮಗ್ರಿ ಸರಬರಾಜು ಮಾಡುತ್ತಿರುವ ವಾಹನಗಳು) ಹೊರತುಪಡಿಸಿ,ನಿಗದಿಪಡಿಸಲಾದ ಸಮಯ ಬಿಟ್ಟು ಉಳಿದ ಸಮಯದಲ್ಲಿ ವಾಹನಗಳು ಹಾಗೂ ಸಾರ್ವಜನಿಕರ ಅನಗತ್ಯ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಕುಲ್ ಆದೇಶ ಹೊರಡಿಸಿದ್ದಾರೆ.
ಎಪಿಎಂಸಿ ಮಾರುಕಟ್ಟೆ ಬಂದ್: ಜನಸಂಖ್ಯೆ ಹೆಚ್ಚು ಇರುವುದರಿಂದ ಎಪಿಎಂಸಿಯಲ್ಲಿ ಸಾಮಾಜಿಕ ಅಂತರ ತಡೆಗಟ್ಟಲು ಸಾಧ್ಯವಾಗದ ಕಾರಣ ಅದನ್ನು ಇಂದಿನಿಂದಲೇ ಬಂದ್ ಮಾಡಲು ನಿರ್ಧರಿಸಲಾಗಿದ್ದು, ಅದರ ಬದಲಿಗೆ ಅಲ್ಲಿರುವ ವ್ಯಾಪಾರಿಗಳನ್ನು ವಿಂಗಡಿಸಿ ಏಳು ಸ್ಥಳಗಳಲ್ಲಿ ತಾತ್ಕಾಲಿಕ ಮಾರುಕಟ್ಟೆಯನ್ನು ಸ್ಥಾಪಿಸಲಾಗಿದೆ ಎಂದು ಡಿಸಿ ನಕುಲ್ ತಿಳಿಸಿದ್ದಾರೆ.
ಈದ್ಗಾ ಮೈದಾನದಲ್ಲಿ, ರೇಡಿಯೋ ಪಾಕರ್್ ಹತ್ತಿರದ ಐಟಿಐ ಕಾಲೇಜು ಮೈದಾನ, ಸುಧಾಕ್ರಾಸ್ ಹತ್ತಿರದ ಎನ್ಸಿಸಿ ಗ್ರೌಂಡ್, ಸಂತ್ ಜಾನ್ ಶಾಲೆಯ ಮೈದಾನ, ಕಪ್ಪಗಲ್ಲು ರಸ್ತೆಯ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ, ಜಿಲ್ಲಾ ಕ್ರೀಡಾಂಗಣ ಮತ್ತು ಶ್ರೀರಾಂಪುರ ಕಾಲೋನಿಯ ಸಕರ್ಾರಿ ಶಾಲೆ ಮತ್ತು ನಗರದ ಮುನ್ಸಿಪಲ್ ಕಾಲೇಜು ಮೈದಾನದ ಈ ಏಳು ಸ್ಥಳದಲ್ಲಿ ತರಕಾರಿ ಮಾರುಕಟ್ಟೆ ಏರ್ಪಡಿಸಲಾಗಿದೆ. ನಾಗರಿಕರು ಬೆಳಗ್ಗೆ 7 ರಿಂದ 11 ರವರೆಗೆ ಮತ್ತು ಸಂಜೆ 5 ರಿಂದ 7 ಗಂಟೆಯವರೆಗೆ ಸಾಮಾಜಿಕ ಅಂತರದಿಂದ ಗ್ರಾಹಕರು ಖರೀದಿ ಮಾಡಬಹುದಾಗಿದೆ ಎಂದು ಅವರು ಹೇಳಿದ್ದಾರೆ. ಇದುವರೆಗೆ ಕೊರೋನಾ ಸಂಬಂಧಸಿದಂತೆ ಬಳ್ಳಾರಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಪಾಸಿಟೀವ್ ಕೇಸ್ ಇದುವರೆಗೂ ಇರುವುದಿಲ್ಲ. ಇದೇ ರೀತಿಯಲ್ಲಿ ಎಲ್ಲಾ ಕಟ್ಟುನಿಟ್ಟಿನ ಕ್ರಮಗೊಳ್ಳುವುದರ ಮೂಲಕ ಕರೋನಾ ವೈರಸ್ ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಭಯಪಡುವ ಅವಶ್ಯಕತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೇರೆ ಸಮಯದಲ್ಲಿ ಸಕರ್ಾರಿ ಸಿಬ್ಬಂದಿಯ ಐಡಿ ಕಾಡರ್್, ಗೂಡ್ಸ್ ಗಾಡಿಯ ಬೇರೆ ಸಮಯದಲ್ಲಿ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಉಳಿದ ಸಮಯದಲ್ಲಿ ಸಾರ್ವಜನಿಕರು ಮನೆಯಲ್ಲಿಯೇ ಇರಬೇಕು ಯಾವುದೇ ಕಾರಣಕ್ಕೂ ಹೊರಗಡೆ ಬರಬಾರದು. ಕೋಲ್ಡ್ ಸ್ಟೋರೇಜ್, ಮೆಣಸಿನಕಾಯಿ ಬೆಳೆ, ಬೆಳೆ ಭತ್ತ ಕಟಾವು ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.
ಸ್ಯಾನಿಟೈಜರ್ ಅವಶ್ಯಕತೆ ಇಲ್ಲ. ಯಾವುದೇ ಸೋಪ್ನಿಂದ 20 ಸೆಕೆಂಡ್ಗಳ ಕಾಲ ತೊಳಿದುಕೊಳ್ಳಬೇಕು. ನಿಗದಿಪಡಿಸಿದ ಸಮಯದಲ್ಲಿ ಮಾತ್ರ ಸಾರ್ವಜನಿಕರು ಅವಶ್ಯಕತೆ ಸಾಮಾಗ್ರಿಗಳನ್ನು ಸಾಮಾಜಿಕ ಅಂತರದಲ್ಲಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಉಳಿದ ಸಮಯದಲ್ಲಿ ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಜಿಲ್ಲಾಡಳಿತಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಕೋರಿದ್ದಾರೆ.