ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ
ವಿಜಯಪುರ 16: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು ಕಚೇರಿಯ ಜಿಲ್ಲಾಧಿಕಾರಿ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ. ವಿವರಗಳನ್ನು ತಿತಿತಿ.ತರಿಚಿಥಿಚಿಠಿಣಡಿ.ಟಿಛಿ.ಟಿ ವೆಬ್ ಸೈಟ್‌ನಲ್ಲಿ ನೋಡಬಹುದಾಗಿದೆ. ಆಯ್ಕೆ ಪಟ್ಟಿಯಲ್ಲಿ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಜನವರಿ 16ರಿಂದ 23ರ ವರೆಗೆ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಹಾಗೂ ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದಾಗಿದೆ. ನಿಗದಿಪಡಿಸಿದ ದಿನಾಂಕ ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧ್ಯಕ್ಷರು ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದಾರೆ. ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ವಿಜಯಪುರ 16: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಶಮ್ಸ್ ಪ್ರೀ ಪ್ರೈಮರಿ ಹಾಗೂ ಮನಗೂಳಿ ರಸ್ತೆಯ ಕೀರ್ತಿ ನಗರದಲ್ಲಿನ ಪ್ರೈಮರಿ ಶಾಲೆಯಲ್ಲಿ ಜ. 20 ರಿಂದ ಜ.27 ರ ವರೆಗೆ ವಾಣಿಜ್ಯ ಪರೀಕ್ಷೆಗಳು ಜರುಗಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ದಿನದಂದು ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ, ಸಿಬ್ಬಂದಿ ಹಾಗೂ ಅಭ್ಯರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟವಾಚ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್ಲೆಸ್, ಕ್ಯಾಲ್ಕುಲೇಟರ್ ಮುಂತಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವುದು ಹಾಗೂ ಬಳಸುವುದನ್ನು ನಿಷೇಧಿಸಿದೆ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಬೆಳಿಗ್ಗೆ 9 ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್ ಗಳು, ಇಂಟರನೆಟ್, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.
ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿಯ ದಿಢೀರ ಭೇಟಿ
ವಿಜಯಪುರ 16: ಇಲ್ಲಿನ ಜಿಲ್ಲಾ ಆಸ್ಪತ್ರೆಯ ತುರ್ತುಚಿಕಿತ್ಸೆ ವಿಭಾಗಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಜ.15ರಂದು ಅನೀರಿಕ್ಷಿತವಾಗಿ ಭೇಟಿ ನೀಡಿದರು.
ಭೇಟಿ ನೀಡಿ ಅಲ್ಲಿರುವ ರೋಗಿಗಳ ಆರೈಕೆಯ ಕುರಿತು ವೈದ್ಯರು ಮತ್ತು ಸಿಬ್ಬಂದಿಯವರಿಂದ ಮಾಹಿತಿಯನ್ನು ಪಡೆದರು. ರೋಗಿಗಳಿಗೆ ಮತ್ತು ರೋಗಿಯ ಸಂಬಂದಿಕರಿಗೆ ನೀಡುತ್ತಿರುವ ಸೌಲಭ್ಯದ ಬಗ್ಗೆ ವಿಚಾರಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಚತೆ, ವಿದ್ಯುತ್ತ ವ್ಯವಸ್ಥೆ, ನೀರು ಮತ್ತು ಇನ್ನಿತರ ಸೌಲಭ್ಯವನ್ನು ಸಮರಾ್ಕಗಿ ನೀಡಲು ವೈದ್ಯರಿಗೆ ಸೂಚಿಸಿದರು.
ಜೊತೆಗೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲು ತಿಳಿಸಿದರು. ಈ ಸಮಯದಲ್ಲಿ ಕಾರ್ಯನಿರತ ವೈದ್ಯಾಧಿಕಾರಿಯಾದ ಡಾ. ತಿಮ್ಮಾಪುರ ಗಲಗಲಿ, ರಾತ್ರಿ ಪಾಳೆಯ ಸೂಪರ್ ವೈಸರಾದ ರೇಖಾ ಇಂಗಳೇಶ್ವರ ಹಾಗೂ ಇತರರು ಉಪಸ್ಥಿತರಿದ್ದರು.