ಕೆರೆಗಳಿಗೆ ನೀರು ಹರಿಸಲು ಹತ್ತು ದಿನಗಳ ಗಡುವು
Ten-day deadline to release water into the lakes
ಹೂವಿನಹಡಗಲಿ, ಸೆ. 7: ತಾಲ್ಲೂಕಿನ ಹ್ಯಾರಡ ಮಲ್ಲಿಯಮ್ಮ ಕೆರೆ, ಹೊಸಕೆರೆ ಹಾಗೂ ದಾಸನಹಳ್ಳಿ ಕೆರೆಗಳಿಗೆ ಹತ್ತು ದಿನಗಳೊಳಗಾಗಿ ಅಧಿಕಾರಿಗಳು ನೀರು ಹರಿಸಬೇಕು. ತಪ್ಪಿದರೆ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರೆ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ಹ್ಯಾರಡ ಕೆರೆ ಅಂಗಳದಲ್ಲಿ ಭಾನುವಾರ ನಡೆದ ಹೋರಾಟ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಯಿತು.
ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹರವಿ ಪ್ರಕಾಶ್ ಮಾತನಾಡಿ, ಕೆರೆಗಳಿಗೆ ನೀರು ತುಂಬಿಸುವುದರಿಂದ ಕೊಳವೆಬಾವಿಗಳ ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ಇದರಿಂದ ಜನರು ಹಾಗೂ ಜಾನುವಾರುಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಆದರೆ ಅಧಿಕಾರಿಗಳು ಸಮರ್ಕವಾಗಿ ನಿರ್ವಹಣೆ ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.
ಕೆರೆ ತುಂಬಿಸುವ ಯೋಜನೆ ಜಾರಿಯಲ್ಲಿದ್ದರೂ ನೀರು ಹರಿಯುತ್ತಿಲ್ಲ. ಶಾಖಾ ಜಾಕ್‌ವೆಲ್‌ಗೆ ಹೆಚ್ಚುವರಿ ಮೋಟಾರ್ ಹಾಗೂ ವಿದ್ಯುತ್ ಲೈನ್ ಅಳವಡಿಸದಿರುವುದರಿಂದ ಸಮಸ್ಯೆ ಉಂಟಾಗಿದೆ. ಅಧಿಕಾರಿಗಳು ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಿ ನೀರು ಹರಿಸಲು ಅನಗತ್ಯ ವಿಳಂಬ ಮಾಡುತ್ತಿದ್ದಾರೆ ಎಂದು ದೂರಿದರು.
ಕೆರೆಗಳಿಗೆ ನೀರು ಹರಿಸಿದರೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ. ಆದ್ದರಿಂದ ತಕ್ಷಣವೇ ಕೆರೆಗಳಿಗೆ ನೀರು ಹರಿಸಬೇಕು. ಇಲ್ಲವಾದರೆ ಜೈಲ್ ಭರೋ ಚಳವಳಿ ಸೇರಿದಂತೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಎಚ್.ಡಿ.ಜಿ.ಗೌಡ, ಕೊಡಬಾಳ ಚಂದ್ರ್ಪ, ನಾಗಪ್ಪ, ಹನುಮಂತಪ್ಪ, ವಸಂತಪ್ಪ, ಮುದ್ದಣ್ಣನವರ ಬಸವರಾಜಪ್ಪ, ವೀರಾಪುರ ಮಂಜುನಾಥ್, ದೇವೇಂದ್ರ್ಪ, ಸೋಮಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 