ಹತ್ತನೆಯ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ
Tenth National Ayurveda Day Celebration Program
ಮಾಂಜರಿ, 23 ; ಪ್ರತಿಯೊಬ್ಬರಲ್ಲಿ ಯಾವುದೇ ದೈಹಿಕ ಮತ್ತು ಮಾನಸಿಕ ಸಮಸ್ಯೆ ಇಲ್ಲದೆ ಸದೃಢ ಆರೋಗ್ಯ ಜೀವನ ನಡೆಸಲು ಆಯುರ್ವೇದ ಗಿಡ ಮೂಲಿಕೆಗಳು ಮತ್ತು ಓಷಧಿಗಳೇ ಸೂಕ್ತ ಎಂದು ಅಂಕಲಿ ಗ್ರಾಮದ ಡಾ ಎನ ಎ ಮಗದುಮ್ ಆಯುರ್ವೇದಿಕ್ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕರಾದ ಡಾ ಎನ್ ಎ ಮಗದುಮ್ ಹೇಳಿದರು ಹೇಳಿದರು.
ಇಂದು ಅಂಕಲಿ ಗ್ರಾಮದ ಎನ್ ಎ ಮಗದುಮ್ ಆಯುರ್ವೇದಿಕ್ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಘಟಕ ವತಿಯಿಂದ ಹಾಗೂ ಆಯುಷ್ ಇಲಾಖೆ, ಆಯುಷ್ ಫೆಡೆರೇಷನ್ ಆಫ್ ಇಂಡಿಯಾ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ಹತ್ತನೆಯ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಗೋಮಟೇಶ ಶಿಕ್ಷಣ ಸಂಸ್ಥೆಯ ಖಜಾಂಜಿಯಾದೆ ಎಲ್‌ಎನ್ ಮಗದುಮ್ ಕಾರ್ಯದರ್ಶಿಕರಾದ ಸುರೇಶ್ ಚೌಗುಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ಪ್ರಸನ್ನ ಸಾವನೂರ್ ಉಪರಾಚಾರ್ಯ ಡಾ ರಾಮಗೌಡ ಪಾಟೀಲ್ ಡಾ ಸುಕುಮಾರ್ಚೌಲ ಡಾ ದೀಪ ಕೋರೆ ಹಾಜರಿದ್ದರು
ಪುರಾತನ ಕಾಲದಿಂದಲೂ ದೇಶಿಯ ಆಯುರ್ವೇದ ಚಿಕಿತ್ಸೆಗೆ ಬಹಳಷ್ಟು ಮಹತ್ವ ವಿದೆ. ಆಯುರ್ವೇದವು ಕೇವಲ ರೋಗಲಕ್ಷಣ ನಿಗ್ರಹಿಸುವುದಲ್ಲದೆ, ಸಮಸ್ಯೆಯ ಮೂಲ ಕಾರಣವನ್ನು ಗುರುತಿಸಿ ಚಿಕಿತ್ಸೆ ನೀಡಲು ಸೂಕ್ತ ವೈದ್ಯಕೀಯ ಕ್ರಮವಾಗಿದೆ. ದೇಹದ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ರೀತಿಯ ಆಯುರ್ವೇದದಲ್ಲಿ ಓಷಧೋಪಚಾರವಿದೆ.ಪ್ರತಿ ವ್ಯಕ್ತಿಯ ದೇಹದ ಪ್ರಕೃತಿ (ದೋಷಗಳು) ವಿಭಿನ್ನವಾಗಿರುತ್ತದೆ. ಆಯುರ್ವೇದವು ಪ್ರತಿಯೊಬ್ಬರಿಗೂ ವ್ಯಕ್ತಿಯ ಪ್ರಕೃತಿ ಅನುಸಾರವಾಗಿ ಚಿಕಿತ್ಸೆ ನೀಡುವ ಮೂಲಕ ಶಾಶ್ವತ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡಬಹುದು ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ಪ್ರಸನ್ನ ಸಾವನೂರ್ ಮಾತನಾಡಿ, ಆಯುರ್ವೇದ ಚಿಕಿತ್ಸೆಯು ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಇದು ದೇಹವನ್ನು ಒಳಗಿನಿಂದ ಬಲಪಡಿಸುವ ಮೂಲಕಪ್ರತಿರಕ್ಷಣಾ ವ್ಯವಸ್ಥೆ ಬಲಪಡಿಸುತ್ತದೆ. ಇದರಿಂದಾಗಿ ಯಾವುದೇ ಅಡ್ಡ ಪರಿಣಾಮ ಗಳಿಲ್ಲದೆ ಶೀಘ್ರ ಚೇತರಿಕೆ ಸಾಧ್ಯವಿದೆ. ಆಯುರ್ವೇದದ ಬಗ್ಗೆ ಸಾರ್ವಜನಿಕರು ಹೆಚ್ಚಿನ ಆಸಕ್ತಿಯನ್ನು ಹೊಂದುವ ಮೂಲಕ ಮುಂದಾಗಬೇಕಿದೆ. ಚಿಕಿತ್ಸೆಗೆ ಆಯುರ್ವೇದವು ಪ್ರತಿಯೊಬ್ಬರು ನಂಬಿಕೆಯಿಂದ ಚಿಕಿತ್ಸೆ ಪಡೆದು ಇದೇ ಚಿಕಿತ್ಸಾ ವಿಧಾನವನ್ನು ಬಯಸುವಂತ ದಿನಗಳು ಸನ್ನಿಹಿತವಾಗಿವೆ. ಆಯುರ್ವೇದ ಜೀವನ, ಆರೋಗ್ಯ ಮತ್ತು ಎಲ್ಲಾ ಋತುಗಳ ಬಗ್ಗೆ ಹೇಳುವಂತಹ ಅದ್ಭುತ ವಿಜ್ಞಾನವಾಗಿದೆ. ಆಯುರ್ವೇದವು ಯೋಗ, ಧ್ಯಾನ, ಮಸಾಜ್ ಮತ್ತು ಉಸಿರಾಟದ ವ್ಯಾಯಾಮ ಗಳ ಮೂಲಕ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಲು ಇದು ಸಹಕಾರಿಯಾಗಿದೆ ಎಂದರು.
ಹತ್ತನೆಯ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಚಿಕ್ಕೋಡಿ ಅಥಣಿ ರಾಯಬಾಗ್ ನಿಪ್ಪಾಣಿ ತಾಲೂಕಿನ ಹಾಗೂ ಸುತ್ತಮುತ್ತಲಿನ ಎಲ್ಲ ವೈದ್ಯರನ್ನು ಈ ವೇಳೆ ಸನ್ಮಾನಿಸಲಾಯಿತು ಈ ವೇಳೆ ಶಿಕ್ಷಣ ಸಂಸ್ಥೆಯ ಖಜಾಂಜಿಯಾದ ಲಲಿತಾ ಮಗದುಮ್ ಡಾ ದೀಪ ಕೋರೆ ಡಾ ಬಾಹುಬಲಿ ಕಾಸಾರ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು
ಆಯುರ್ವೇದವು ಪ್ರತಿಯೊಬ್ಬರಿಗೂ ವ್ಯಕ್ತಿಯ ಪ್ರಕೃತಿ ಅನುಸಾರವಾಗಿ ಚಿಕಿತ್ಸೆ ನೀಡುವ ಮೂಲಕ ಶಾಶ್ವತ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡಬಹುದು.
ಡಾ ಎನ್ ಎ ಮಗದುಮ್ ಸಂಸ್ಥಾಪಕರು
ಗೊಮ್ಮಟೇಶ ಶಿಕ್ಷಣ ಸಂಸ್ಥೆ ಅಂಕಲಿ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 