ಭೀಕರ ಅಪಘಾತ: ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಸಂತಾಪ

Terrible accident: President Ajjampir Qadri condoles

ಭೀಕರ ಅಪಘಾತ: ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಸಂತಾಪ 

ಹಾವೇರಿ 22:  ಯಲ್ಲಾಪುರ ಸಮೀಪದ ಅರಬೈಲ್ ಘಟ್ಟದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಸವಣೂರ ಮೂಲದ 10 ಜನ ಸ್ಥಳದಲ್ಲೇ ಮೃತಪಟ್ಟಿರುವುದಕ್ಕೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷ ಅಜ್ಜಂಪೀರ ಖಾದ್ರಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.  

ಮೃತರ  ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಹಾಗೂ ಮೃತರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿರುವ ಅವರು, ಈ ದುರಂತದಲ್ಲಿ ಗಾಯಗೊಂಡಿರುವ 15 ಜನರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲು ದೂರವಾಣಿ ಮೂಲಕ ಯಲ್ಲಾಪುರ ಸಿಪಿಐಗೆ ತಿಳಿಸಿದ್ದಾರೆ ಹಾಗೂ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಕಿಮ್ಸ್‌ ಆಸ್ಪತ್ರೆ ಆಡಳಿತಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.