ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ: ಹಲವು ಮಂದಿ ಮೃತ: 20 ಜನರಿಗೆ ಗಾಯ
Terrorist attack in Pahalgam: Several dead, 20 injured
ಶ್ರೀನಗರ 22: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಹಲವಾರು ಪ್ರವಾಸಿಗರು ಗಾಯಗೊಂಡಿದ್ದಾರೆ ಹಲವು ಮಂದಿ ಮೃತಪಟ್ಟಿದ್ದು, ಕನಿಷ್ಠ 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ನಡೆಸಿದ ದಾಳಿಯಲ್ಲಿ ಗುಂಡು ನನ್ನ ಗಂಡನ ತಲೆಗೆ ತಗುಲಿತು ಮತ್ತು ಘಟನೆಯಲ್ಲಿ ಇತರ ಏಳು ಜನರು ಗಾಯಗೊಂಡರು' ಎಂದು ಸಂತ್ರಸ್ತ ಮಹಿಳೆಯೊಬ್ಬರು ತಿಳಿಸಿದ್ದಾರೆ.
ಗಾಯಾಳುಗಳನ್ನು ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಲಾಗಿದೆ. 12 ಮಂದಿ ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಹಲ್ಗಾಮ್ ಪಟ್ಟಣದ ಬೈಸರನ್ ಹುಲ್ಲುಗಾವಲಿನ ಪ್ರದೇಶದಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಇದಕ್ಕೂ ಮೊದಲು, ಗುಂಡಿನ ಸದ್ದು ಕೇಳಿಬಂದ ನಂತರ, ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಾಳಿಕೋರರ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಸ್ಥಳದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 