ನವದೆಹಲಿ, ಜನವರಿ 20, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅತ್ಯಂತ ಪ್ರಿಯವೆನಿಸಿರುವ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ ಮೂರನೇ ಅವತರಣಿಕೆ ಇಂದು ನಡೆಯಲಿದೆ. ತಾಲಕಟೋರ ಸ್ಟೇಡಿಯಂನಲ್ಲಿ 11 ಗಂಟೆಗೆ ಈ ಕಾರ್ಯಕ್ರಮ ಜರುಗಲಿದ್ದು, ಪರೀಕ್ಷಾ ಒತ್ತಡ ನಿಭಾಯಿಸುವ ವಿದ್ಯಾರ್ಥಿಗಳಿಗೆ ಅವರು ಅನುಭವ, ಉಪಯುಕ್ತ ಸಲಹೆ ನೀಡಲಿದ್ದಾರೆ. ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ದೇಶಾದ್ಯಂತ ವಿವಿಧ ಶಾಲೆಗಳ ಸುಮಾರು 2 ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ಧಾರೆ.ಕರ್ನಾಟಕದಿಂದ ವಿವಿಧ ಜಿಲ್ಲೆಗಳಿಂದ ಆಯ್ದ 42 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿದ್ಧಾರೆ. ದೂರದರ್ಶನ ಈ ಕಾರ್ಯಕ್ರಮದ ನೇರ ಪ್ರಸಾರ ಮಾಡಲಿದೆ.