ಟೆಸ್ಟ್ ಶ್ರೇಯಾಂಕ: ಅಗ್ರ ಸ್ಥಾನದಲ್ಲಿ ವಿರಾಟ್, ಲಾಬುಶೇನ್ ಭಾರೀ ಜಿಗಿತ

ನವದೆಹಲಿ, ಜ.8 ಬುಧವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರಥಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆದರೆ ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟ್ಸ್ಮನ್ ಚೇತೇಶ್ವರ ಪೂಜಾರ ಮತ್ತು ಉಪನಾಯಕ ಅಜಿಂಕ್ಯ ರಹಾನೆ ಅವರು ಶ್ರೇಯಾಂಕದಲ್ಲಿ ಕುಸಿತವಾಗಿದೆ. ಆಸ್ಟ್ರೇಲಿಯಾದ ಉದಯೋನ್ಮುಖ ಸ್ಟಾರ್ ಬ್ಯಾಟ್ಸ್ಮನ್ ಮಾರ್ನಸ್ ಲಾಬುಶೇನ್ ಟೆಸ್ಟ್ ಶ್ರೇಯಾಂಕದಲ್ಲಿ ಭಾರೀ ಜಿಗಿತವನ್ನು ಕಂಡಿದ್ದು, ಮೂರನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದು ಅವರ ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕವೂ ಆಗಿದೆ. ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ 3-0್ಖ್ತದಿು ಟೆಸ್ಟ್ ಸರಣಿ ಗೆಲ್ಲುವಲ್ಲಿ ಲಾಬುಶೆನ್ ಪ್ರಮುಖ ಪಾತ್ರವಹಿಸಿದ್ದರು. ಲಾಬುಶೆನ್ 827 ರೇಟಿಂಗ್ ಪಾಯಿಂಟ್ಗಳನ್ನು ಹೊಂದಿದ್ದು, ವಿರಾಟ್ 928 ಪಾಯಿಂಟ್ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವನ್ ಸ್ಮಿತ್ 911 ಅಂಕಗಳನ್ನು ಹೊಂದಿದ್ದಾರೆ. ಸ್ಮಿತ್ ಮತ್ತು ವಿರಾಟ್ ನಡುವೆ 17 ಪಾಯಿಂಟ್ಗಳ ಅಂತರವಿದೆ. ಅಗ್ರ ಐದು ಬ್ಯಾಟ್ಸ್ಮನ್ಗಳಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ಗಳು ಪ್ರಾಬಲ್ಯ ಮೆರೆದಿದ್ದಾರೆ. ಡೇವಿಡ್ ವಾರ್ನರ್ (793) ಎರಡು ಏರಿಕೆ ಕಂಡಿದ್ದು, ಐದನೇ ಸ್ಥಾನದಲ್ಲಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ (814), ಒಂದು ಸ್ಥಾನವನ್ನು ಕಳೆದುಕೊಂಡಿದ್ದಾರೆ. ಭಾರತದ ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟ್ಸ್ಮನ್ ಪೂಜಾರ ಕೂಡ ಒಂದು ಸ್ಥಾನ ಕಳೆದುಕೊಂಡು 791 ಅಂಕಗಳೊಂದಿಗೆ ಆರನೇ ಸ್ಥಾನಕ್ಕೆ ಕುಸಿದಿದ್ದರೆ, ರಹಾನೆ (759) ಎರಡು ಸ್ಥಾನಗಳನ್ನು ಕಳೆದುಕೊಂಡು ಒಂಬತ್ತನೇ ಸ್ಥಾನಕ್ಕೆ ತಲುಪಿದ್ದಾರೆ. ಅಗ್ರ 10 ಟೆಸ್ಟ್ ಬೌಲರ್ಗಳಲ್ಲಿ, ಭಾರತದ ಮೂವರು ಬೌಲರ್ ಗಳಿದ್ದಾರೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ 794 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ. ಗಾಯದಿಂದ ಚೇತರಿಸಿಕೊಂಡ ಬುಮ್ರಾ ಪ್ರಸ್ತುತ ಶ್ರೀಲಂಕಾ ವಿರುದ್ಧದ ಟಿ-20 ಸರಣಿಯಿಂದ ಭಾರತ ತಂಡಕ್ಕೆ ಮರಳಿದ್ದಾರೆ. ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (772) ಒಂಬತ್ತು, ವೇಗದ ಬೌಲರ್ ಮೊಹಮ್ಮದ್ ಶಮಿ 10 ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮ್ಮಿನ್ಸ್ (904) ತಮ್ಮ ಪ್ರಥಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ನ್ಯೂಜಿಲೆಂಡ್ನ ನೀಲ್ ವೆಗ್ನರ್ (852) ನಂತರದ ಸ್ಥಾನದಲ್ಲಿದ್ದರೆ, ವೆಸ್ಟ್ ಇಂಡೀಸ್ ತಂಡದ ನಾಯಕ ಜೇಸನ್ ಹೋಲ್ಡರ್ (830) ಮೂರನೇ, ದಕ್ಷಿಣ ಆಫ್ರಿಕಾದ ಕಗಿಸೊ ರಬಾಡಾ (821) ನಾಲ್ಕನೇ ಮತ್ತು ಆಸ್ಟ್ರೇಲಿಯಾದ ಮಿಚೆಲ್ ಸ್ಟಾಕರ್್ (796) ಐದನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ನ ಜೇಮ್ಸ್ ಆಂಡರ್ಸನ್ ಐದು ಸ್ಥಾನಗಳನ್ನು ಗಳಿಸಿ ಏಳನೇ ಸ್ಥಾನಕ್ಕೆ ತಲುಪಿದ್ದಾರೆ. ದಕ್ಷಿಣ ಆಫ್ರಿಕಾದ ವನರ್ೆನ್ ಫಿಲಾಂಡರ್ ಮೂರು ಸ್ಥಾನಗಳನ್ನು ಕಳೆದುಕೊಂಡು ಎಂಟನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಲ್ ರೌಂಡರ್ ಶ್ರೇಯಾಂಕದಲ್ಲಿ ಭಾರತದ ರವೀಂದ್ರ ಜಡೇಜಾ (406 ಅಂಕಗಳು) ಎರಡನೇ ಸ್ಥಾನದಲ್ಲಿದ್ದಾರೆ. ರವಿಚಂದ್ರನ್ ಅಶ್ವಿನ್ (309) ಐದು, ವೆಸ್ಟ್ ಇಂಡೀಸ್ನ ಜೇಸನ್ ಹೋಲ್ಡರ್ (473) ಅಗ್ರಸ್ಥಾನದಲ್ಲಿದ್ದಾರೆ.