ಕೊಪ್ಪಳ 25: ದ್ವಿತೀಯ ಪಿಯುಸಿ ವಾಷರ್ಿಕ ಪರೀಕ್ಷೆಗಳು ಮಾಚರ್್. 04ರಿಂದ 23ರವರೆಗೆ ನಡೆಯಲಿದ್ದು, ಯಾವುದೇ ಅಕ್ರಮಗಳಿಕೆ ಅವಕಾಶ ಕೊಡದಂತೆ ಅಚ್ಚುಕಟ್ಟಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದ್ವಿತೀಯ ಪಿಯುಸಿ ವಾಷರ್ಿಕ ಪರೀಕ್ಷೆಗಳು ನಡೆಸುವ ಕುರಿತಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಫೆ.25) ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದ್ವಿತೀಯ ಪಿಯುಸಿ ವಾಷರ್ಿಕ ಪರೀಕ್ಷೆಗಳು ಮಾಚರ್್. 04 ರಿಂದ 23 ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. ಪರೀಕ್ಷಾ ಪ್ರಕ್ರಿಯೆಯು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿರಬೇಕು. ಈ ನಿಟ್ಟಿನಲ್ಲಿ ಪ್ರಶ್ನೆಪತ್ರಿಕೆ ಖಜಾನೆ ಇಲಾಖೆಗೆ ಠೇವಣಿಯಾಗುವುದರಿಂದ ಮೊದಲುಗೊಂಡು, ವಿತರಣೆಯಾಗುವವರೆಗೂ ಎಲ್ಲವನ್ನೂ ವಿಡಿಯೋ ಚಿತ್ರೀಕರಣ ಮಾಡಬೇಕು. ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ತೆಗೆದುಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾಗರ್ಾಧಿಕಾರಿಗಳಿಗೆ ವಹಿಸಲಾಗಿದೆ. ಹಾಘೂ ತ್ರಿಸದಸ್ಯ ಸಮಿತಿಯನ್ನು ರಚಿಸಿ ಆಯಾ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿ ಆದೇಶಿಸಲಾಗಿದೆ. ಪ್ರಶ್ನೆ ಪತ್ರಿಕೆ ಒಯ್ಯುವ ಅಧಿಕಾರಿಗಳು ಪರೀಕ್ಷಾ ದಿನದಂದು ಬೆಳಗ್ಗೆ 6.30 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಹಾಜರಿರಬೇಕು. ವಿಳಂಬಕ್ಕೆ ಅವಕಾಶವಿಲ್ಲದಂತೆ ಪ್ರಶ್ನೆಪತ್ರಿಕೆಯನ್ನು ನಿಗದಿತ ಅವಧಿಯೊಳಗೆ ನಿಗದಿತ ಕೇಂದ್ರಕ್ಕೆ ತಲುಪಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ ನಿದರ್ಿಷ್ಟ ಅಧಿಕಾರಿಗಳನ್ನು ಹೊರತು ಪಡಿಸಿ ಯಾವುದೇ ಸಿಬ್ಬಂದಿ ಅಥವಾ ವಿದ್ಯಾಥರ್ಿಗಳು ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಹಾಗೂ ಕರ್ತವ್ಯಕ್ಕೆ ನಿಯೋಜಿಸಿದ ಎಲ್ಲಾ ಸಿಬ್ಬಂದಿಗಳು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ, ಪರೀಕ್ಷೆ ಬರೆಯುವ ವಿದ್ಯಾಥರ್ಿಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆಯನ್ನು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೈಗೊಳ್ಳಬೇಕು. ಪರೀಕ್ಷಾ ದಿನದಂದು ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಪ್ರತಿ ಕೇಂದ್ರಕ್ಕೆ ಕಡ್ಡಾಯವಾಗಿ ಒಬ್ಬರು ಮಹಿಳಾ ಪೊಲೀಸ್ ಪೇದೆಯನ್ನು ನಿಯೋಜಿಸಬೇಕು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇದ್ದು, ಆ ವ್ಯಾಪ್ತಿಯ ಝರಾಕ್ಷ್ ಕೇಂದ್ರಗಳು ಪರೀಕ್ಷಾ ದಿನದಂದು ಮುಚ್ಚಿರಬೇಕು. ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ಪದವಿ ಪೂರ್ವ ಶಿಕ್ಷಣ ಮಂಡಳಿ ನೀಡಿರುವ ಸೂಚನೆಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ವಿದ್ಯಾಥರ್ಿಗಳು ನಕಲಿನಲ್ಲಿ ಪಾಲ್ಗೊಂಡರೆ ಅಥವಾ ಇನ್ನಾವುದೇ ಪರೀಕ್ಷಾ ಅಕ್ರಮಗಳು ನಡೆದರೆ ಸಂಬಂಧಿಸಿದ ಅಧಿಕಾರಿಗಳನ್ನು ನೇರ ಹೊಣೆ ಮಾಡಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕರಾದ ಎಲ್.ಜಿ ರಾಟಿಮನಿ ಅವರು ಮಾತನಾಡಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾಚರ್್. 04 ರಿಂದ 23 ರವರೆಗೆ ನಡೆಯಲಿದ್ದು, ಕೊಪ್ಪಳ, ಗಂಗಾವತಿ, ಕುಷ್ಟಗಿ, ಕನಕಗಿರಿ, ಕಾರಟಗಿ, ತಾವರಗೇರಾ ಸೇರಿದಂತೆ ಜಿಲ್ಲೆಯ 16 ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ ಎಂದು ಸಭೆಗೆ ಮಾಹಿತಿ ನೀಡಿ, ಪರೀಕ್ಷಾ ಕರ್ತವ್ಯದಲ್ಲಿ ಅಧಿಕಾರಿಗಳು ಪಾಲಿಸಬೇಕಾದ ನಿಯಮಗಳ ಕುರಿತು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಸಿ.ಡಿ.ಗೀತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ದೊಡ್ಡಬಸಪ್ಪ ನೀರಲಕೇರಿ, ಜಿಲ್ಲಾ ಖಜಾನಾಧಿಕಾರಿ ಮೆಹಬೂಬಿ, ತಹಶೀಲ್ದಾರರಾದ ಜೆ.ಬಿ. ಮಜ್ಜಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಸೊನ್ನದ, ಗಂಗಾವತಿ ತಾ.ಪಂ ಮುಖ್ಯಾಧಿಕಾರಿ ಮೋಹನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಾಲೇಜುಗಳ ಪ್ರಾಚಾರ್ಯರು ಮತ್ತಿತರರು ಉಪಸ್ಥಿತರಿದ್ದರು.