ಲಕ್ಷ್ಮಣ ಅಂಗಡಿಗೆ ಥೈಲ್ಯಾಂಡ್ ದೇಶದ ಸುಸ್ಥಿರ ಶಿಕ್ಷಣಾಭಿವೃದ್ದಿ ಪ್ರಶಸ್ತಿ
Thailand Sustainable Education Development Award for Lakshmana Angadi
ದೇವರಹಿಪ್ಪರಗಿ 09: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ವತಿಯಿಂದ ಸಾವಿರಾರು ವಿದ್ಯಾರ್ಥಿಗಳ ಪಾಲಿನ ದಾರೀದೀಪವಾಗಿದ್ದಾರೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದ ಲಕ್ಷ್ಮಣ್ ಅಂಗಡಿ ಅವರಿಗೆ ಉತ್ತರ ಪ್ರದೇಶದ ಫಜಿಯಾಬಾದನ ಕೃಷಿ ಹಾಗೂ ತಂತ್ರಜ್ಞಾನ ಅಭಿವೃದ್ಧಿ ಸಂಸ್ಥೆಯವರ ಶಿಫಾರಸ್ಸಿನ ಮೇರೆಗೆ ಪ್ರತಿಷ್ಠಿತ ಥೈಲ್ಯಾಂಡ್ ದೇಶದ ಸುಸ್ಥಿರ ಶಿಕ್ಷಣಾಭಿವೃದ್ದಿ ಹರಿಕಾರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಥೈಲ್ಯಾಂಡ್ ದೇಶದ ಬ್ಯಾಂಕಾಕ್ ನಗರದಲ್ಲಿ ದಿ.05.06.2026ರ ವಿಶ್ವ ಪರಿಸರ ದಿನಾಚರಣೆಯಂದು ಏರಿ್ಡಸಿದ್ದ 10ನೇ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ತಾಲೂಕಿನ ಪ್ರತಿಷ್ಠಿತ ಶ್ರೀ ವೆಂಕಟೇಶ್ವರ ಶಿಕ್ಷಣ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷರಾದ ಲಕ್ಷ್ಮಣ್ ರೂಪ ಸಿಂಗ ಅಂಗಡಿ ಅವರಿಗೆ ಥೈಲ್ಯಾಂಡ್ ದೇಶದ ಪ್ರತಿಷ್ಠಿತ ಅಂತರಾಷ್ಟ್ರೀಯ ಸುಸ್ಥಿರ ಶಿಕ್ಷಣಾಭಿವೃದ್ದಿ ಹರಿಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಲಕ್ಷ್ಮಣ ಅಂಗಡಿಯವರು ತಾಲೂಕಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮಕ್ಕಳ ಕಲ್ಯಾಣಕ್ಕಾಗಿ ಶ್ರೀ ವೆಂಕಟೇಶ್ವರ ಶಿಕ್ಷಣ ಅಭಿವೃದ್ಧಿ ಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸಂಸ್ಥೆಯ ಅಧೀನದಲ್ಲಿ 2 ಪ್ರಾಥಮಿಕ ಶಾಲೆ, 5 ಪ್ರೌಢಶಾಲೆ, ತಲಾ 01 ಪದವಿಪೂರ್ವ ಕಾಲೇಜು, ಪದವಿ ಮಹಾವಿದ್ಯಾಲಯ, ಪ್ಯಾರಾ ಮೆಡಿಕಲ್ ಕಾಲೇಜು ಹಾಗೂ ಐಟಿಐ ಕಾಲೇಜ ಪ್ರಾರಂಭಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನದ ಸುಧೆಯನ್ನು ಬಿತ್ತಿ, ಪ್ರತಿಯೊಬ್ಬನಿಗೂ ಸುಸ್ಥಿರ ಭವಿಷ್ಯವನ್ನು ರೂಪಿಸಲು ಅಗತ್ಯವಾದ ಜ್ಞಾನ, ಕೌಶಲ್ಯಗಳು ಮತ್ತು ಮೌಲ್ಯ ಗಳನ್ನು ಹೆಚ್ಚಿಸಿ ವಿಜಯಪುರ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗಾಗಿ ಶ್ರಮಿಸಿ ಹಾಗೂ ಪರಿಸರ ಪ್ರೇಮಿಯಾಗಿ ನಾಡಿನ ನೆಲ, ಜಲ, ಭಾಷೆಯ ಅಭಿವೃದ್ಧಿಗಾಗಿ ಶ್ರಮಿಸಿದ ಅವರನ್ನು ಗುರುತಿಸಿ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕೆ. ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ, ಸಮಾಜದ ಬಂಧುಗಳು, ಗಣ್ಯರು, ಅಭಿಮಾನಿಗಳು ಹಾಗೂ ಸ್ನೇಹಿತರು ಲಕ್ಷ್ಮಣ್ ಅಂಗಡಿ ಅವರ ಕಾಯಕ ಪ್ರಜ್ಞೆಯನ್ನು ಶ್ಲಾಘಿಸಿ, ಅಭಿನಂದಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 