ಮುಂಬೈ, 23 ಮಹಾರಾಷ್ಟ್ರ ರಾಜಕೀಯದಲ್ಲಿ ಯಾರೂ ಊಹಿಸಲು ಸಾಧ್ಯವಾಗದ ಬೆಳವಣೆಗಳು ನೆಡೆದಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫನ್ನವಿಸ್ ನೂತನ ಮುಖ್ಯಮಂತ್ರಿಯಾಗಿ ಶನಿವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎನ್ಸಿಪಿ ಹಿರಿಯ ಮುಖಂಡ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶನಿವಾರ ಬೆಳಿಗ್ಗೆ ರಾಜ ಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶಾರಿ ಅವರು ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗೆ ಪ್ರಮಾಣ ಪ್ರಮಾಣ ವಚನ ಬೋಧಿಸಿದರು. ಶಿವಸೇನೆ ಜೊತೆ ಸಕರ್ಾರ ರಚಿಸುವುದು ಖಚಿತ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ರಾತ್ರಿ ಹೇಳಿದ್ದರು. ಆದರೆ, ಶುಕ್ರವಾರ ರಾತ್ರಿ ನಡೆದ ಹಲವು ರಾಜಕೀಯ ಬೆಳವಣಿಗೆಗಳ ಹಿನ್ನಲೆಯಲ್ಲಿ ಫಡ್ನವೀಸ್ ಎನ್ಸಿಪಿಯಿಂದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಸ್ಥಾನ ಪಡೆಯಲೇಬೇಕು ಎಂದು ಹಠಗೆ ಬಿದ್ದಿದ್ದ ಶಿವಸೇನೆಗೆ. ಎನ್ಸಿಪಿ ಅನಿರೀಕ್ಷಿತ ಆಘಾತ ನೀಡಿದೆ. ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿ ಎಂದು ಘೋಷಿಸಿದ ನಂತರ ಎನ್ಸಿಪಿಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.