ಸಮುದಾಯ ಕೇಂದ್ರವನ್ನು ಕೋವಿಡ್ ಚಿಕಿತ್ಸೆಗೆ ಸಜ್ಜುಗೊಳಿಸುವಂತೆ ಸಿಇಓ ಸೂಚನೆ

ಹಾವೇರಿ: ಜು.10: ರಟ್ಟಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ಮೂಲ ಸೌಕರ್ಯಗಳನ್ನು ಕಲ್ಪಿಸುವ ಕುರಿತಂತೆ ಸ್ಥಳೀಯ ವೈದ್ಯಾಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ರಮೇಶ ದೇಸಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಶುಕ್ರವಾರ ರಟ್ಟಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು ಕೋವಿಡ್ ತುತರ್ು ಸಂದರ್ಭದಲ್ಲಿ ಸ್ಥಳೀಯವಾಗಿಯೇ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕೋವಿಡ್ ಕೇರ್ ಸೆಂಟರ್, ಐಸೋಲೇಷನ್ ವಾಡರ್್, ಪ್ರೈಸರೈಸ್ ಆಕ್ಸಿಜನ್ ಪೂರೈಕೆಯ ಚಿಕಿತ್ಸಾ ಸೌಲಭ್ಯವಿರುವ ಹಾಸಿಗೆ ವ್ಯವಸ್ಥೆ ಸೇರಿದಂತೆ ಕನಿಷ್ಠ 50 ಹಾಸಿಗೆಗಳ ಚಿಕಿತ್ಸಾ ಕೇಂದ್ರವಾಗಿ ಸೌಕರ್ಯಗಳನ್ನು ಕಲ್ಪಿಸುವ ಕುರಿತಂತೆ ಪ್ರಸ್ತಾವನೆ ಸಲ್ಲಿಸಬೇಕು ಹಾಗೂ ತ್ವರಿತವಾಗಿ ಕೋವಿಡ್ ಸೇವೆಗೆ ಸಜ್ಜುಗೊಳಿಸುವಂತೆ ತಾಲೂಕಾ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.ಕೋವಿಡ್ ಸಂದರ್ಭದಲ್ಲಿ ವೈದ್ಯಕೀಯ ಮತ್ತು ಅರೇವೈದ್ಯಕೀಯ ಸಿಬ್ಬಂದಿಗಳ ಸೇವೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಒಳ ಆವರಣ ಹಾಗೂ ಹೊರ ಆವರಣದ ಸ್ವಚ್ಛತೆ, ಅಗತ್ಯ ಸೌಕರ್ಯಗಳ ಕುರಿತಂತೆ ವಿವರ ಸಲ್ಲಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಡಾ.ನಿಲೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.