ಲಾಕ್‌ಡೌನ್ ಸಮಯದಲ್ಲಿ ಬಡವರಿಗೆ ಉಚಿತ ಹಾಲು ನೀಡುವ ಯೋಜನೆಗೆ ಮುಖ್ಯಮಂತ್ರಿ ಚಾಲನೆ
ಬೆಂಗಳೂರು, ಏ.2, ಬಡವರಿಗೆ ಉಚಿತ ಹಾಲು ವಿತರಿಸುವ ಯೋಜನೆಗೆ ಬೆಂಗಳೂರಿನ ಅಶ್ವಥ್ ನಗರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಚಾಲನೆ ನೀಡಿದರು.ಕೆಎಂಎಫ್ನ ಹೆಚ್ಚುವರಿ ಹಾಲನ್ನು ಖರೀದಿಸಿ ಬಡವರಿಗೆ ವಿಸ್ತರಿಸುವ ಯೋಜನೆ ಇದಾಗಿದೆ. ಮುಖ್ಯಮಂತ್ರಿ ಮತ್ತು ಸಚಿವರ ತಂಡ ಈ ಪ್ರದೇಶದಲ್ಲಿ ಮನೆ ಮನೆಗೂ ತೆರಳಿ ಹಾಲು ವಿತರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವ ಶಿವರಾಮ್ ಹೆಬ್ಬಾರ್ ಮೊದಲಾದವರು ಮುಖ್ಯಮಂತ್ರಿಗೆ ಸಾಥ್ ನೀಡಿದರು.ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕೊರೊನಾ ಸೋಂಕು ನಿರ್ಮೂಲನೆಗಾಗಿ ಲಾಕ್ ಡೌನ್ ಜಾರಿಯಲ್ಲಿದ್ದಾಗಲೂ ರೈತರಿಂದ ಅಬಾಧಿತವಾಗಿ ಹಾಲು ಖರೀದಿಸಲು ಕೆಎಂಎಫ್ ಗೆ ಸೂಚಿಸಲಾಗಿತ್ತು. ಹಾಗೆ ರೈತರಿಂದ ಖರೀದಿಸಲಾಗುತ್ತಿರುವ ಹಾಲಿನ ಪೈಕಿ ಸುಮಾರು 7.5 ಲಕ್ಷ ಲೀಟರ್ ಹಾಲನ್ನು ಬಡವರಿಗೆ ಉಚಿತವಾಗಿ ಹಂಚಬೇಕು ಎಂಬ ನಿರ್ಧಾರಕ್ಕೆ ಬಂದಿದ್ದೆವು. ಅದರಂತೆ ಇಂದಿನಿಂದ ಬೆಂಗಳೂರಿನ ಅಶ್ವತ್ಥ ನಗರದ ಕೊಳಗೇರಿ ನಿವಾಸಿಗಳಿಗೆ ಉಚಿತವಾಗಿ ಹಾಲು ವಿತರಿಸುವುದರ ಮೂಲಕ ಈ ವ್ಯವಸ್ಥೆಗೆ ಚಾಲನೆ ನೀಡಲಾಯಿತು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 