ರಾಜ್ಯದ ಕಾಂಗ್ರೆಸ್ ಸರ್ಕಾರ ಸತ್ತು ಹೋಗಿದೆ: ಆರ್. ಅಶೋಕ ಆರೋಪ
The Congress government in the state is dead: R. Ashoka alleges
ವಿಪಕ್ಷ ನಿಯೋಗ ಜುಗೂಳ ಗ್ರಾಮಕ್ಕೆ ಭೇಟಿ
ಕಾಗವಾಡ 04: ಸದ್ಯಕ್ಕೆ ಕಣ್ಣು, ಕಿವಿ ಹಾಗೂ ಬಾಯಿ ಇಲ್ಲದಂತಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಸುತ್ತು ಹೋಗಿದ್ದು, ಅತಿವೃಷ್ಟಿಯಿಂದ ಕಂಗಾಲಾಗಿರುವ ರೈತರ ಗೋಳು ಕೇಳುವವರೆ ಇಲ್ಲದಂತಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಅವರು, ಶುಕ್ರವಾರ ದಿ. 03 ರಂದು ಸಂಜೆ ತಾಲೂಕಿನ ಜುಗೂಳ ಮತ್ತು ಮಂಗಾವತಿ ಗ್ರಾಮಗಳಲ್ಲಿ ಅತಿವೃಷ್ಟಿಯಿಂದ ಹಾಳಾಗಿರುವ ಬೆಳೆಗಳನ್ನು ವಿಕ್ಷಣೆ ಮಾಡಿ, ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ರಾಜ್ಯದಲ್ಲಿ ಅತೀವೃಷ್ಠಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ಸರ್ಕಾರ ಮೌನ ವಹಿಸಿದೆ ಎಂದು ಆರೋಪಿಸಿದ ಅವರು, ರೈತರ ಅಳಲು ಕೇಳದ ಸರ್ಕಾರ ಕಿವುಡಾಗಿದೆ. ರಾಜ್ಯದಲ್ಲಿ ಜನಸಾಮಾನ್ಯರು ತೊಂದರೆಗಿಡಾಗಿದ್ದರೂ ಕೂಡ ಸರ್ಕಾರ ಕಣ್ಣು ಮುಚ್ಚಿ ಕುಳಿತುಕೊಂಡಿದೆ. ಹೀಗಾಗಿ ಸರ್ಕಾರ ಸತ್ತು ಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮಾತನಾಡಿ, ತಾಲೂಕಿನ ಜುಗೂಳ ಹಾಗೂ ಮಂಗಾವತಿ ಗ್ರಾಮಗಳಲ್ಲಿ ಪ್ರವಾಹದ ಹಿನ್ನಿರಿನಿಂದ ಸುಮಾರು 3 ಸಾವಿರಕ್ಕೂ ಅಧಿಕ ಪ್ರಮಾಣದ ಭೂಮಿಯಲ್ಲಿ ನೀರು ನಿಂತಿದ್ದು, ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ. ಈ ಕುರಿತು ಸರ್ಕಾರದ ಗಮನ ಸೆಳೆದು, ನಿಂತಿರುವ ನೀರನ್ನು ಹೋಗಲಾಡಿಸಲು ಯೋಜನೆ ರೂಪಿಸುವಂತೆ ಒತ್ತಾಯಿಸಲಾಗುವುದು. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಮಳೆಯಾಗಿ ಕೃಷ್ಣಾ ನದಿಯ ನದಿಯ ನೀರು ಹೆಚ್ಚಾಗಿ ಈ ಭಾಗದ ರೈತರ ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿ ಬೆಳೆಹಾನಿಯಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸಿತ್ತಿದ್ದು, ಸರ್ಕಾರ ಎಚ್ಚೆತ್ತುಕೊಂಡು ಪರಿಹಾರ ನೀಡುವಂತೆ ಆಗ್ರಹಿಸಿದರು.
ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ನಿಖಿಲ ಕತ್ತಿ, ಎನ್.ರವಿಕುಮಾರ, ಮಾಜಿ ಸಚಿವ ಶ್ರೀಮಂತ ಪಾಟೀಲ, ಬಿಜೆಪಿ ಮುಖಂಡ ಶೀತಲಗೌಡ ಪಾಟೀಲ, ಕಾಗವಾಡ ಮಂಡಲ ಬಿಜೆಪಿ ಅಧ್ಯಕ್ಷ ಅರುಣಕುಮಾರ ಗಣೇಶವಾಡಿ, ಸೇರಿದಂತೆ ಅಧಿಕಾರಿಗಳು, ರೈತ ಮುಖಂಡರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 