ಬೆಂಗಳೂರು: ಸಮ್ಮಿಶ್ರ ಸಕರ್ಾರದಲ್ಲಿ ಮೈತ್ರಿಪಕ್ಷಗಳ ನಡುವೆ ಹೊಸದೊಂದು ಭಿನ್ನಾಭಿಪ್ರಾಯ ಹುಟ್ಟಿಕೊಳ್ಳುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಉತ್ತರ ಕನರ್ಾಟಕದ ಬಗ್ಗೆ ನೀಡಿರುವ ಹೇಳಿಕೆ ಕಾಂಗ್ರೆಸ್ ನಾಯಕರನ್ನು ತೀವ್ರ ಒತ್ತಡದಲ್ಲಿ ಮತ್ತು ಮುಜುಗರಕ್ಕೀಡುಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಉತ್ತರ ಕನರ್ಾಟಕಕ್ಕೆ ಪ್ರತ್ಯೇಕ ರಾಜ್ಯ ರಚನೆಗೆ ಒತ್ತಾಯಿಸಿ ಆಗಸ್ಟ್ 2ರಂದು 16 ಜಿಲ್ಲೆಗಳಲ್ಲಿ ಕರೆ ನೀಡಲಾಗಿರುವ ಬಂದ್ ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಬಿಸಿಬಿಸಿ ಚಚರ್ೆ ಮತ್ತು ವಿವಾದಗಳಿಗೆ ಕಾರಣವಾಗಿದೆ.
ಕುಮಾರಸ್ವಾಮಿಯವರು ಆಡಿರುವ ಮಾತಿಗೆ ಬೇಸರ ವ್ಯಕ್ತಪಡಿಸಿ ಈಗಾಗಲೇ ಉತ್ತರ ಕನರ್ಾಟಕ ಭಾಗದ ಕಾಂಗ್ರೆಸ್ ಶಾಸಕರು ಮತ್ತು ಹಿರಿಯ ನಾಯಕರು ಕಾಂಗ್ರೆಸ್ ಹೈಕಮಾಂಡ್ ಗೆ ದೂರು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮುಖ್ಯಮಂತ್ರಿಗಳ ಹೇಳಿಕೆಯಿಂದ ಉತ್ತರ ಕನರ್ಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ಹೊಡೆತ ಬೀಳುವ ಸಾಧ್ಯತೆಯಿರುವುದರಿಂದ ಮುಂದಿನ ವರ್ಷದ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಈ ವಿಷಯವನ್ನು ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಚಚರ್ೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.
ಮತ ಹಾಕುವಾಗ ಜನರು ತಮ್ಮ ಜಾತಿ ಮತ್ತು ಹಣ ಲೆಕ್ಕಾಚಾರ ಹಾಕುತ್ತಾರೆ. ಈಗ ನಾನು ಕೆಲಸ ಮಾಡಬೇಕೆಂದು ಹೇಳುತ್ತಾರೆ ಎಂದು ಮೊನ್ನೆ ಚೆನ್ನಪಟ್ಟಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೊಪ್ಪಳದಲ್ಲಿ ರೈತರು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ಕುರಿತು ಹೇಳಿದ್ದರು.
ಮುಖ್ಯಮಂತ್ರಿಯವರ ಈ ಹೇಳಿಕೆ ಉತ್ತರ ಕನರ್ಾಟಕ ಭಾಗದ ರೈತರನ್ನು ಕೆರಳಿಸಿದೆ. ಮುಖ್ಯಮಂತ್ರಿಯವರು ಈ ರೀತಿ ಹೇಳಿಕೆ ನೀಡುತ್ತಿರುವುದು ಇದು ಮೊದಲ ಸಲವೇನಲ್ಲ. "ನನ್ನ ಜನರು ನನಗೆ ಮತ ಹಾಕಿ ಮುಖ್ಯಮಂತ್ರಿ ಆಗುವ ಅವಕಾಶ ಕರುಣಿಸಿದ್ದಾರೆ. ಹಾಗಿರುವಾಗ ಅವರಿಗೆ ಉಪಯೋಗವಾಗುವ ಕೆಲವು ಯೋಜನೆಗಳನ್ನು ನೀಡಬೇಡವೇ" ಎಂದು ನಿಮ್ಮ ಬಜೆಟ್ ದಕ್ಷಿಣ ಕನರ್ಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಿದೆಯಲ್ಲವೇ ಎಂದು ಮಾಧ್ಯಮದ ಪ್ರತಿನಿಧಿಗಳು ಕೇಳಿದ್ದಾಗ ಈ ಹಿಂದೆ ಕುಮಾರಸ್ವಾಮಿ ಹೇಳಿದ್ದರು.
ಪ್ರತಿ ಬಾರಿಯೂ ಮುಖ್ಯಮಂತ್ರಿ ಈ ರೀತಿ ಮಾತನಾಡುತ್ತಾರೆ, ಉತ್ತರ ಕನರ್ಾಟಕದವರನ್ನು ಕೆರಳಿಸುತ್ತಾರೆ. ಅವರು ಮುಖ್ಯಮಂತ್ರಿಯಾಗಿ ಆ ರೀತಿ ಹೇಳಿಕೆ ನೀಡಬಾರದು. ನಮ್ಮ ಪಕ್ಷ ಇಡೀ ಕನರ್ಾಟಕದ ಪರವಾಗಿದ್ದು ಎಲ್ಲಾ ಜಿಲ್ಲೆಗಳನ್ನು ಸಮಾನವಾಗಿ ನೋಡುತ್ತದೆ. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಚಚರ್ೆ ನಡೆಸಬೇಕೆಂದು ಕೆಪಿಸಿಸಿಯ ಹಿರಿಯ ನಾಯಕರು ಹೇಳಿದ್ದಾರೆ.
ಆದರೆ ಸಂಸತ್ತಿನ ಮುಂಗಾರು ಅಧಿವೇಶನ ಮುಗಿಯದೆ ಕೆಪಿಸಿಸಿ ಸಮನ್ವಯ ಸಮಿತಿ ಸಭೆ ನಡೆಯುವುದು ಸಂಶಯ. ಏಕೆಂದರೆ ಎಐಸಿಸಿ ಪ್ರಧಾನ ಕಾರ್ಯದಶರ್ಿ ಕೆ ಸಿ ವೇಣುಗೋಪಾಲ್ ಅವರ ಉಪಸ್ಥಿತಿ ಇರಬೇಕಿದೆ.
ಉತ್ತರ ಕನರ್ಾಟಕ ಭಾಗದಲ್ಲಿ ಜೆಡಿಎಸ್ ನ ಪ್ರಾಬಲ್ಯ ಅತ್ಯಂತ ಕಡಿಮೆ. 16 ಜಿಲ್ಲೆಗಳಲ್ಲಿ ಅದರ ಅಸ್ತಿತ್ವವೇ ಇಲ್ಲ. ಆದರೆ ಕಾಂಗ್ರೆಸ್ ಮಾತ್ರ ಹಾಗಿಲ್ಲ, ಈ ಜಿಲ್ಲೆಗಳಲ್ಲಿ ಕಾಂಗ್ರೆಸ್ ಬಿಜೆಪಿಯೊಂದಿಗೆ ಪ್ರಬಲ ಸ್ಪಧರ್ೆ ನಡೆಸುತ್ತಿದೆ. 2013ರ ಚುನಾವಣೆಗೆ ಹೋಲಿಸಿದರೆ ಈ ಜಿಲ್ಲೆಗಳಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನಗಳನ್ನು ಗೆದ್ದಿದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆ ಕಾಂಗ್ರೆಸ್ ಶಾಸಕರನ್ನು ತೊಂದರೆಗೆ ಸಿಲುಕಿಸಿದೆ.